ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದ್ದರೂ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಜನರಿಗೆ ಗುಡ್ನ್ಯೂಸ್ ಸಿಕ್ಕಿದೆ.
ಜಿಲ್ಲೆಯು ಸದ್ಯ ಕೊರೊನಾ ಮುಕ್ತ ಜಿಲ್ಲೆಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಕೋವಿಡ್-19 ಸೋಂಕಿನಿಂದ ಆಸ್ಪತ್ರೆ ಸೇರಿದ್ದ ಎಲ್ಲಾ 16 ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
Advertisement
Advertisement
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 16 ಮಂದಿಗೆ ಸೋಂಕು ಪತ್ತೆಯಾಗಿತ್ತು. ಅವರೆಲ್ಲರೂ ಇದೀಗ ಸಂಪೂರ್ಣ ಗುಣಮುಖತಾಗಿದ್ದು, ಜಿಲ್ಲಾಡಳಿತವು ಡಿಸ್ಚಾರ್ಜ್ ಗೂ ಮುನ್ನವೇ ಎಲ್ಲರ ವೈದ್ಯಕೀಯ ಪರೀಕ್ಷೆ ಮಾಡಿಸಿದೆ. ರಿಪೋರ್ಟ್ ನಲ್ಲಿ ಕೊರೊನಾ ನೆಗೆಟಿವ್ ಬಂದಿದ್ದರಿಂದ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಸದ್ಯ ಜಿಲ್ಲೆಯಲ್ಲಿ ಯಾವುದೇ ಸಕ್ರಿಯ ಪ್ರಕರಣಗಳಿಲ್ಲ.
Advertisement
ಚಾಮರಾಜನಗರ:
ರಾಜ್ಯದಲ್ಲಿ, ಅದರಲ್ಲೂ ದಕ್ಷಿಣ ಭಾರತದ ಜಿಲ್ಲೆಗಳಲ್ಲಿ ಕೊರೊನಾ ಮುಕ್ತ ಜಿಲ್ಲೆ ಎಂಬ ಹೆಗ್ಗಳಿಕೆಗೆ ಚಾಮರಾಜನಗರ ಜಿಲ್ಲೆ ಪಾತ್ರವಾಗಿದೆ. ವಿಶೇಷವೆಂದರೆ ಜಿಲ್ಲೆಯು ಕೊರೊನಾ ಹಾಟ್ಸ್ಪಾಟ್ ಜಿಲ್ಲೆ ಹಾಗೂ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ತಮಿಳುನಾಡು, ಕೇರಳ ರಾಜ್ಯಗಳು ಒಂದೆಡೆಯಾದರೆ ಮೈಸೂರು, ಮಂಡ್ಯ ಇನ್ನೊಂದೆಡೆ ಇವೆ. ಹೀಗಿದ್ದರೂ ಜಿಲ್ಲೆಯಲ್ಲಿ ಒಂದೇ ಒಂದು ಕೊರೋನಾ ಪ್ರಕರಣ ಪತ್ತೆಯಾಗಿಲ್ಲ.
Advertisement
ಹಾಟ್ಸ್ಪಾಟ್ಗಳ ಮಧ್ಯೆ ಇದ್ದರೂ ಚಾಮರಾಜನಗರದಲ್ಲಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿಲ್ಲ. ಈ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರು ಚಾಮರಾಜನಗರ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರಿಗೆ ದೂರವಾಣಿ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ದಕ್ಷಿಣ ಭಾರತದಲ್ಲಿಯೇ ಚಾಮರಾಜನಗರ ಕೊರೊನಾ ಮುಕ್ತ ಜಿಲ್ಲೆಯಾಗಿದೆ. ಇದುವರೆಗೂ ತೆಲಂಗಾಣದ ವಾರಂಗಲ್ ಗ್ರಾಮೀಣ ಹಾಗೂ ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಮಾತ್ರ ಕೊರೊನಾ ಪತ್ತೆಯಾಗಿರಲಿಲ್ಲ. ಆದರೆ ವಾರಂಗಲ್ ಗ್ರಾಮೀಣ ಭಾಗದಲ್ಲಿ ಮಂಗಳವಾರ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ದಕ್ಷಿಣ ಭಾರತದಲ್ಲಿ ಕೊರೊನಾ ಮುಕ್ತ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆಗೆ ಚಾಮರಾಜನಗರ ಪಾತ್ರವಾಗಿದೆ.