– ಇಂದು ರಾತ್ರಿಯೇ ಭಾರತಕ್ಕೆ ಬಂದಿಳಿಯುವ ಸಾಧ್ಯತೆ
– 2019ರ ಪುಲ್ವಾಮಾ ಬಳಿಕ ಅತಿದೊಡ್ಡ ದಾಳಿ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸುಮಾರು 30 ಮಂದಿ ಸಾವನ್ನಪ್ಪಿದ್ದು, 2019ರ ಪುಲ್ವಾಮಾ ದಾಳಿ ಬಳಿಕ ಅತಿದೊಡ್ಡ ದಾಳಿಯಾಗಿದೆ. ಇದು ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಎಂದು ಅಧಿಕಾರಿಗಳು ಹೇಳಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿಯೇ ತಮ್ಮ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ಮರಳಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ದಾಳಿ ನಡೆದ ಕೆಲವೇ ಒಂದು ಗಂಟೆಯಲ್ಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗತೊಡಗಿತು. ಈ ಕುರಿತು ಮಾಹಿತಿ ಪಡೆದ ಮೋದಿ, ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಇದೀಗ 2 ದಿನಗಳ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಇಂದು ರಾತ್ರಿಯೇ ಭಾರತಕ್ಕೆ ಬಂದಿಳಿಯಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಕುರಿತ ವಿಡಿಯೋ ಇಲ್ಲಿದೆ…