ಚಿಕ್ಕೋಡಿ : ಕುಡಚಿ ಶಾಸಕ ಹಾಗೂ ಕರ್ನಾಟಕ ತಾಂಡಾ ಅಭಿವೃಧ್ದಿ ನಿಗಮದ ಅಧ್ಯಕ್ಷ ಪಿ.ರಾಜೀವ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ರಾಜೀವ್ ಅವರು ಸಾಮಾಜಿಕ ಜಾಲತಾಣದ ಮೂಲಕ ಸೋಂಕು ತಗುಳಿರುವ ಕುರಿತು ಸ್ಪಷ್ಟಪಡಿಸಿದ್ದಾರೆ.
ನನಗೆ ಕೊರೊನಾ ಪಾಸಿಟಿವ್ ಬಂದ ಕಾರಣ ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಎಲ್ಲರೂ ಕೂಡ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ರಾಜೀವ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡು ವಿನಂತಿಸಿಕೊಂಡಿದ್ದಾರೆ.
ಇಂದು ನಾನು ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಪರೀಕ್ಷಾ ವರದಿ ಪಾಸಿಟಿವ್ ಎಂದು ಬಂದಿರುತ್ತದೆ. ವೈದ್ಯರ ಸಲಹೆಯಂತೆ ಸ್ವಗೃಹದ ಪ್ರತ್ಯೇಕ ಕೊಠಡಿಯಲ್ಲಿ ಕ್ವಾರಂಟೈನ್ ಆಗಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ.
ಕೋವಿಡ್ ಬಗ್ಗೆ ಭಯ ಬೇಡ ಎಚ್ಚರಿಕೆ ಹಾಗೂ ಆತ್ಮವಿಶ್ವಾಸವಿರಲಿ.
— P Rajeev (@PRajeevBJP) April 22, 2021
ಇಂದು ನಾನು ಕೋವಿಡ್ ಪರೀಕ್ಷೆಗೊಳಪಟ್ಟಾಗ ಪಾಸಿಟಿವ್ ಎಂದು ತಿಳಿದುಬಂದಿರುತ್ತದೆ. ವೈದ್ಯರು ಕೊಟ್ಟ ಸಲಹೆ ಹಾಗೂ ಅಗತ್ಯ ಚಿಕಿತ್ಸಾ ಕ್ರಮಗಳೊಂದಿಗೆ ಸ್ವಗೃಹದ ಪ್ರತ್ಯೇಕ ಕೊಠಡಿಯಲ್ಲಿಯೇ ಸ್ವ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಲು ವಿಂತಿಸುತ್ತೇನೆ. ಕೋವಿಡ್ ಬಗ್ಗೆ ಭಯ ಬೇಡ. ಎಚ್ಚರಿಕೆ ಹಾಗೂ ಆತ್ಮವಿಶ್ವಾಸದಿಂದ ಕೊರೊನವನ್ನು ಎದುರಿಸಿ. ಬೇಗನೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಳ್ಳಲು ನಿಸರ್ಗದಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.