ಕುಸಿದು ಬಿತ್ತು ತಾಲೂಕು ಪಂಚಾಯಿತಿ ಸಭಾಂಗಣದ ಮೇಲ್ಛಾವಣಿ- ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ: ತಾಲೂಕು ಪಂಚಾಯಿತಿ ಸಭಾಂಗಣದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಸಭಾಂಗಣದಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ. ತೀರ್ಥಹಳ್ಳಿಯ ತಾಲೂಕು ಪಂಚಾಯಿತಿ ಸಭಾಂಗಣದ ಕಟ್ಟಡ ಹಲವು ವರ್ಷಗಳಿಂದ ಶಿಥಿಲಗೊಂಡಿತ್ತು. ಶಿಥಿಲಗೊಂಡಿದ್ದ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಹಲವು ಬಾರಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರು. ಆದರೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಬೇಜವಾಬ್ದಾರಿ ತೋರಿದ್ದರು.

- Advertisement -

ಇಂದು ಸಭಾಂಗಣದ ಮೇಲ್ಛಾವಣಿ ಕುಸಿದು ಬಿದ್ದಿದೆ. ಆದರೆ ಸಭಾಂಗಣದಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಜನ ಪ್ರತಿನಿಧಿಗಳು ಇನ್ನಾದರೂ ಈ ಕುರಿತು ಚಿತ್ತ ಹರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

- Advertisement -