ನವದೆಹಲಿ: ನಾಲ್ಕನೇ ಹಂತದ ಲಾಕ್ಡೌನ್ ವಿಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಮಾರ್ಗಸೂಚಿಗಳನ್ನು ಬದಲಾಯಿಸುವಂತಿಲ್ಲ ಎಂದು ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಇಲಾಖೆ ತಿಳಿಸಿದೆ.
ಇಂದು ಈ ಸಂಬಂಧ ಆದೇಶ ಹೊರಡಿಸಿರುವ ಗೃಹ ಇಲಾಖೆ ಕೇಂದ್ರ ಸರ್ಕಾರ ನೀಡಿರುವ ನಿಯಮಗಳನ್ನು ಸಡಿಲಿಕೆ ಮಾಡುವಂತಿಲ್ಲ. ಆದರೆ ಮತ್ತಷ್ಟು ನಿಯಮಗಳನ್ನು ಕಠಿಣ ಮಾಡಲು ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ.
Advertisement
Advertisement
ಕಂಟೈನ್ಮೆಂಟ್, ಬಫರ್, ರೆಡ್, ಗ್ರೀನ್, ಆರೆಂಜ್ ಜೋನ್ ಗಳನ್ನು ಆರೋಗ್ಯ ಇಲಾಖೆ ಸಲಹೆ ಮೇರೆಗೆ ಮಾಡಿದ್ದು, ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಪ್ರದೇಶಗಳಿಗೆ ಲಾಕ್ಡೌನ್ ವಿನಾಯತಿ ನೀಡಿದರೆ ಇದು ಯಥಾವತ್ತಾಗಿ ಜಾರಿಗೆ ಬರಬೇಕು. ಕಂಟೈನ್ಮೆಂಟ್ ಜೋನ್ ಗಳಲ್ಲಿ ಯಾವುದೇ ಕಾರಣಕ್ಕೂ ವಿನಾಯತಿ ನೀಡಬಾರದು ಎಂದು ಸೂಚಿಸಿದೆ.
Advertisement
Advertisement
ಕೇಂದ್ರ ಸರ್ಕಾರ ತನ್ನ ಆದೇಶದಲ್ಲಿ ಎಲ್ಲ ವಲಯಗಳಲ್ಲಿ ನಿರ್ಬಂಧಿಸಿರುವ ವಲಯಗಳಲ್ಲಿ ಯಾವುದೇ ಕಾರಣಕ್ಕೂ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿನಾಯತಿ ನೀಡದಂತೆ ಗೃಹ ಇಲಾಖೆ ಎಚ್ಚರಿಸಿದೆ.