ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಜ್ವರ, ಕೆಮ್ಮು ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಪರೀಕ್ಷೆಗೆ ಒಳಗಾಗಿದ್ದರು. ಇಂದು ಕೋವಿಡ್ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಹೆಬ್ಬಾಳ್ಕರ್ ಜೊತೆ ಕುಟುಂಬದ 8 ಜನ ಸದಸ್ಯರಿಗೆ ಸೋಂಕು ದೃಢಪಟ್ಟಿದೆ. ಹೆಬ್ಬಾಳ್ಕರ್ ಅವರ ಕಾರು ಚಾಲಕ, ಅಡಿಗೆ ಸಿಬ್ಬಂದಿಗೂ ಕೊರೊನಾ ಬಂದಿದೆ.
Advertisement
ನಾನು, ನನ್ನ ಸಹೋದರ ಚನ್ನರಾಜ ಹಟ್ಟಿಹೊಳಿ ಹಾಗೂ ನಮ್ಮ ವಾಹನದ ಚಾಲಕ ಕೊರೊನಾ ಸೋಂಕಿಗೆ ಒಳಪಟ್ಟಿದ್ದು, ನಮ್ಮ ಸಂಪರ್ಕಕ್ಕೆ ಬಂದವರೆಲ್ಲ ದಯವಿಟ್ಟು ಕೊರೊನಾ ಸೋಂಕಿನ ಬಗ್ಗೆ ಪರೀಕ್ಷಿಸಿಕೊಳ್ಳಿರಿ ಎಂದು ವಿನಂತಿಸುತ್ತೇನೆ.
— Laxmi Hebbalkar (@laxmi_hebbalkar) April 16, 2021
Advertisement
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಹೆಬ್ಬಾಳ್ಕರ್ ಅಬ್ಬರದ ಪ್ರಚಾರ ಮಾಡಿದ್ದರು. ಕೈ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಸೇರಿದಂತೆ ಸಾಕಷ್ಟು ಜನರ ಪ್ರಾಥಮಿಕ ಸಂಪರ್ಕಕ್ಕೆ ಹೆಬ್ಬಾಳ್ಕರ್ ಬಂದಿದ್ದರು.
Advertisement
ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಹೆಬ್ಬಾಳ್ಕರ್ ಮತ್ತು 8 ಮಂದಿ ಮನೆಯಲ್ಲೇ ಹೋಮ್ ಕ್ವಾರಂಟೈನ್ ಆಗಿದ್ದಾರೆ.