Connect with us

Corona

ಕೊಡಗಿನಲ್ಲಿ ಭಾನುವಾರದ ಲಾಕ್‍ಡೌನ್‍ಗೆ ವ್ಯಾಪಕ ಬೆಂಬಲ

Published

on

– ಜನರ ಓಡಾಟವಿಲ್ಲದೆ ಬಿಕೋ ಎನ್ನುತ್ತಿವೆ ರಸ್ತೆಗಳು
– ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್

ಮಡಿಕೇರಿ: ಕೊರೊನಾ ಮಹಾಮಾರಿ ನಿಯಂತ್ರಿಸಲು ರಾಜ್ಯ ಸರ್ಕಾರ ಮುಂದಿನ ಭಾನುವಾರದಿಂದ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಘೊಷಿಸಿದೆ. ಆದರೆ ಕೊಡಗಿನ ಜನತೆ ಇಂದು ಬೆಳಗ್ಗೆಯಿಂದಲೇ ಮಡಿಕೇರಿ ನಗರದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್‍ಮಾಡಿ ಕೊರೊನಾ ವಿರುದ್ಧ ಸಮರಕ್ಕೆ ಮುಂದಡಿ ಇಟ್ಟಿದ್ದಾರೆ.

ಜಿಲ್ಲೆಯಲ್ಲಿ ದಿನೇ ದಿನೇ ಕೊವೀಡ್-19 ಪ್ರಕರಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಿಸಲು ಎಲ್ಲ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಸೋಸಿಯೇಷನ್ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ನಿರ್ಧಾರ ಮಾಡಲಾಗಿತ್ತು. ಅದರಂತೆ ಜಿಲ್ಲೆಯ ಜನತೆ ಕೊರೊನಾ ಸೊಂಕಿನ ಪರಿಣಾಮವನ್ನು ಎಚ್ಚೆತ್ತುಕೊಂಡು ಜೂನ್ 26 ರಿಂದ ಜುಲೈ 4 ರವೆಗೆ ಮಧ್ಯಾಹ್ನ 2 ಗಂಟೆಯ ನಂತರ ಸಂಪೂರ್ಣ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಬೆಳಗ್ಗೆಯಿಂದಲೇ ನಗರದಲ್ಲಿ ವಾಹನಗಳ ಸಂಚಾರವೂ ಇಲ್ಲದೆ, ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಜನರ ಓಡಾಟವಿಲ್ಲದೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಜನರೇ ಈ ರೀತಿಯಲ್ಲಿ ಸ್ವಯಂ ಪ್ರೇರಿತವಾಗಿ ಈ ನಿರ್ಧಾರ ತೆಗೆದುಕೊಂಡಿರುವುದು ಆಶಾದಾಯಕ ಬೆಳವಣಿಗೆ ಎಂದು ಚೇಂಬರ್ ಆಫ್ ಕಾಮರ್ಸ್‍ನ ಪ್ರಮುಖರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *