ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಶ್ಲೇಷ ಮಳೆಯ ಆರ್ಭಟದ ಹಿನ್ನೆಲೆಯಲ್ಲಿ ಗುರುವಾರ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿದಿತ್ತು. ಇದೀಗ ಜಿಲ್ಲೆಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ಬೆಟ್ಟ ಕುಸಿತದಿಂದ ನಾಲ್ವರು ನಾಪತ್ತೆ- ಎನ್ಡಿಆರ್ಎಫ್ ತಂಡ ಸ್ಥಳಕ್ಕೆ ದೌಡು
ಮಡಿಕೇರಿ ತಾಲೂಕಿನ ಬೊಟ್ಲಪ್ಪ ಗ್ರಾಮದಲ್ಲಿ ಭೂಕುಸಿತವಾಗಿದ್ದು, ಇದರಿಂದ ಮುನ್ನೆಚ್ಚರಿಕೆಯಾಗಿ ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಸ್ಥಳೀಯರಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಅಪಾಯದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಮಾಡಲಾಗುತ್ತಿದೆ. ಆದರೆ ಸಂಪರ್ಕ ಕಡಿತಗೊಂಡ ಪರಿಣಾಮ ಕಾರ್ಯಾಚರಣೆಗೆ ಅಡ್ಡಿಯಾಗಿದೆ.
Advertisement
Advertisement
ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರೋ ಮಳೆ ಹಿನ್ನೆಲೆಯಲ್ಲಿ ಭಾಗಮಂಡಲದ ಭಗಂಡೇಶ್ವರ ದೇವಸ್ಥಾನ ಜಲಾವೃತವಾಗಿದೆ. ಸತತವಾಗಿ ಎರಡನೇ ವರ್ಷವೂ ದೇವಲಯದ ಆವರಣಕ್ಕೆ ನೀರು ನುಗ್ಗಿದೆ. ಗುರುವಾರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ನುಗ್ಗಿದೆ.
Advertisement
Advertisement
ಇನ್ನೂ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಕುಶಾಲನಗರದ ಜನರು ಪ್ರವಾಹದ ಭೀತಿಯಲ್ಲಿದ್ದಾರೆ. ಇದರಿಂದ ಸಾಯಿ ಬಡಾವಣೆ ಕುವೆಂಪುನಗರ ಮುಳುಗಡೆಯ ಭೀತಿಯಲ್ಲಿದೆ. ಅಲ್ಲದೇ ಮನೆಗಳಿಗೆ ನದಿಯ ನೀರು ನುಗ್ಗಿದ್ದು, ಭಾಗಶಃ ಮನೆಗಳು ಜಲಾವೃತವಾಗಿವೆ. ಇದರಿಂದ ಬಡಾವಣೆಯ ಜನರು ಸಂಕಷ್ಟದಲ್ಲಿದ್ದಾರೆ. ಮಧ್ಯಾಹ್ನದ ವೇಳೆಗೆ ನೀರಿನ ಪ್ರಮಾಣ ಮತ್ತಷ್ಟು ಜಾಸ್ತಿಯಾಗಲಿದೆ.