ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಂಟಲು ಪರೀಕ್ಷೆಗೆ ಜನತೆ ಮುಗಿ ಬಿಳುತ್ತಿದ್ದಾರೆ. ಈ ಘಟನೆ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕು ಮತ್ತು ಕುಶಾಲನಗರದ ಸಮುದಾಯದ ಅರೋಗ್ಯ ಕೇಂದ್ರದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿ ಆಗುತ್ತಿರುವುದರಿಂದ ಆತಂಕಗೊಂಡ ಸ್ಥಳೀಯರು ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗಂಟಲ ದ್ರವ ಪರೀಕ್ಷೆಗೆ ತೆರಳಿದ್ದಾಗ ಜನ ಜಂಗುಳಿ ಏರ್ಪಟ್ಟಿದೆ. ತಪಾಸಣೆಗೆ ಹೋಗಿದ್ದ ಸಂದರ್ಭದಲ್ಲಿ ಹೊರ ರೋಗಿ ಸಮಸ್ಯೆ ಹಾಗೂ ಸಿಬ್ಬಂದಿ ವಿಳಂಬ ಧೋರಣೆಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಮುದಾಯ ಅರೋಗ್ಯ ಕೇಂದ್ರದಲ್ಲಿ ಕೆಲಕಾಲ ನೂಕು ನುಗ್ಗಲು ಉಂಟಾದ್ದರಿಂದ ಸಾರ್ವಜನಿಕರು ಮತ್ತು ಟೆಕ್ನಿಷಿಯನ್‍ಗಳ ನಡುವೆ ವಾಗ್ವಾದ ನಡೆದಿವೆ. ಅಲ್ಲದೆ ಗಂಟಲ ದ್ರವ ಪರೀಕ್ಷಿಸಲು ನಿರಾಕರಿಸಿದ ತಂತ್ರಜ್ಞರ ವಿರುದ್ಧವೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಕುಶಾಲನಗರದ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಏಕಾಏಕಿ 50 ಜನರು ಆರೋಗ್ಯ ಕೇಂದ್ರಕ್ಕೆ ತೆರಳಿದ್ದರಿಂದ ಹೀಗೆ ಆಗಿದೆ ಎನ್ನಲಾಗಿದೆ.