ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಇಷ್ಟು ದಿನ ನಿಯಂತ್ರಣದಲ್ಲಿದ್ದ ಕೊರೊನಾ ಮಹಾಮಾರಿ ಬುಧವಾರ ಸ್ಫೋಟಗೊಂಡಿದೆ. ಒಂದೇ ದಿನ 14 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದರಿಂದ ಕೊಡಗಿನ 6 ಏರಿಯಾಗಳನ್ನು ನಿನ್ನೆ ರಾತ್ರಿ ಸೀಲ್‍ಡೌನ್ ಮಾಡಲಾಗಿದೆ.
ಮಡಿಕೇರಿ ನಗರದ ಓಂಕಾರೇಶ್ವರ ದೇವಾಸ್ಥಾನ ರಸ್ತೆ, ಪುಟಾಣಿ ನಗರ, ಡೇರಿ ಫಾರಂ, ಮಡಿಕೇರಿ ತಾಲೂಕಿನ ತಾಳತ್ ಮನೆ ಮತ್ತು ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮದ ಏರಿಯಾ ಒಂದನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದೆ. ಏರಿಯಾಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಪೊಲೀಸ್ ನಿಯೋಜಿಸಲಾಗಿದೆ.
Advertisement
Advertisement
ಈ ಮೂಲಕ ಜನರು ಸೀಲ್‍ಡೌನ್ ಏರಿಯಾಗಳಿಂದ ಜನರು ಹೊರ ಹೋಗದಂತೆ ಮತ್ತು ಹೊರಗಿನವರು ಒಳಗೆ ಬರದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಒಟ್ಟಿನಲ್ಲಿ ಕೊಡಗಿನಲ್ಲಿ ಕೊರೊನಾ ಮಹಾಮಾರಿ ಅಬ್ಬರಿಸುತ್ತಿದ್ದು, ಜಿಲ್ಲೆಯ ಜನತೆಯಲ್ಲಿ ತೀವ್ರ ಆತಂಕ ಎದುರಾಗಿದೆ.