Connect with us

Bengaluru City

ಕೊರೊನಾ ಪಾಸಿಟಿವ್ – ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ವಾಜೀದ್ ಖಾನ್ ನಿಧನ

Published

on

ಮುಂಬೈ: ಕೊರೊನಾಗೆ ನಿರ್ದೇಶಕ, ಸಂಗೀತ ನಿರ್ದೇಶಕ, ಹಾಡುಗಾರ ವಾಜೀದ್ ಖಾನ್(42) ಮೃತಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ಕೋವಿಡ್ 19 ಪಾಸಿಟಿವ್ ಕಂಡು ಬಂದಿದ್ದ ಇವರು ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಕೆಲ ತಿಂಗಳ ಹಿಂದೆ ಕಿಡ್ನಿ ಕಸಿ ಮಾಡಿಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮುಂಬೈ ಚೆಂಬೂರ್ ನಲ್ಲಿರುವ ಸುರಾನಾ ಆಸ್ಪತ್ರೆಗೆ ದಾಖಲಾಗಿದ್ದರು.

 

View this post on Instagram

 

My Brother Wajid left us.

A post shared by Sonu Nigam (@sonunigamofficial) on

ಸಂಗೀತ ನಿರ್ದೇಶಕ ಸಲೀಂ ಮರ್ಚೆಂಟ್ ಈ ಬಗ್ಗೆ ಪ್ರತಿಕ್ರಿಯಿಸಿ, ವಾಜೀದ್ ಖಾನ್ ಹಲವು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಸಿ ಮಾಡಿದ ಬಳಿಕ ಕಿಡ್ನಿ ಸಮಸ್ಯೆ ಕಾಡುತ್ತಿತ್ತು. ಕೆಲ ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಕಳೆದ 4 ದಿನಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣುತ್ತಿರಲಿಲ್ಲ. ದಿನದಿಂದ ದಿನಕ್ಕೆ ಸಮಸ್ಯೆ ಹೆಚ್ಚಾಗುತ್ತಾ ಹೋಗಿತ್ತು ಎಂದು ತಿಳಿಸಿದರು.

1998ರಲ್ಲಿ ಸಲ್ಮಾನ್ ಖಾನ್ ಅಭಿನಯದ ಪ್ಯಾರ್ ಕಿಯಾ ತೋ ಢರ್ನಾ ಕಿಯಾ ಸಿನಿಮಾಕ್ಕೆ ಸಂಗೀತ ನೀಡುವ ಮೂಲಕ ವಾಜೀದ್ ಖಾನ್ ಸಿನಿ ಜರ್ನಿ ಆರಂಭಿಸಿದ್ದರು. ಹೆಚ್ಚಾಗಿ ಸಲ್ಮಾನ್ ಖಾನ್ ಸಿನಿಮಾಗೆ ಸಂಗೀತಾ ನಿರ್ದೇಶನ ನೀಡಿದ್ದು ವಿಶೇಷ. ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಕೆಲಸ ಮಾಡಿದ್ದ ಇವರು ಲಾಕ್‍ಡೌನ್ ಸಮಯದಲ್ಲಿ ಸಲ್ಮಾನ್ ಖಾನ್ ವರ ಪನ್ವೇಲ್ ಫಾರಂ ಹೌಸ್ ಪ್ಯಾರ್ ಕರೋನಾ ಮತ್ತು ಭಾಯಿ ಭಾಯಿ ಸಾಂಗ್ ಚಿತ್ರೀಕರಿಸಿ ಯೂಟ್ಯೂಬ್ ನಲ್ಲಿ ರಿಲೀಸ್ ಮಾಡಿದ್ದರು.

ಸಿನಿಮಾ ಕ್ಷೇತ್ರದ ಪ್ರಿಯಾಂಕ ಚೋಪ್ರಾ, ಪರಿಣಿತಿ ಚೋಪ್ರಾ ಸೇರಿದಂತೆ ಹಲವರು ಕಲಾವಿದರು, ಸಂಗೀತಾ ನಿರ್ದೇಶಕರು ವಾಜೀದ್ ಖಾನ್ ನಿಧನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಕಂಬನಿ ಮಿಡಿದಿದ್ದಾರೆ.

Click to comment

Leave a Reply

Your email address will not be published. Required fields are marked *