ಕೊರೊನಾಗೆ ಸಾಹಿತಿ ಬಲಿ- ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ

ಹಾವೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇದೇ ವೇಳೆ ಕೊರೊನಾ ಸೋಂಕಿತ ಸಾಹಿತಿಯ ಅಂತ್ಯಕ್ರಿಯೆಗೆ ಸ್ಥಳೀಯರು ವಿರೋಧ ಮಾಡಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ನಗರದ ಹೊರವಲಯದಲ್ಲಿರುವ ಮೆಡ್ಲೇರಿ ರಸ್ತೆಯಲ್ಲಿ ನಡೆದಿದೆ.

ನಿನ್ನೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮಹಿಳಾ ಸಾಹಿತಿಯ ಮೃತಪಟ್ಟಿದ್ದರು. ಮೆಡ್ಲೇರಿ ರಸ್ತೆಯಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು. ಗಂಗಾಜಲತಾಂಡಾ, ಬಸಲೀಕಟ್ಟಿ ತಾಂಡಾ, ಗೋವಿಂದ ಬಡಾವಣೆ ಸೇರಿದಂತೆ ಸ್ಥಳೀಯರ ವಿರೋಧ ಮಾಡಿದ್ದಾರೆ.

- Advertisement -

ಸ್ಥಳೀಯರ ವಿರೋಧದ ಹಿನ್ನೆಲೆಯಲ್ಲಿ ಮೃತದೇಹವನ್ನು ಒಂದು ಗಂಟೆಯಿಂದ ಅಂಬ್ಯುಲೆನ್ಸ್ ವಾಹನದಲ್ಲೇ ಇಟ್ಟುಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ನಿಂತಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಯ್ದುಕೊಳ್ಳದೆ ವಿರೋಧ ಮಾಡುತ್ತಿದ್ದ ಸ್ಥಳೀಯರಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

- Advertisement -

- Advertisement -