ಬೆಂಗಳೂರು: ಕೋವಿಡ್ 19 ನಿಂದ ಹಲವು ಸಮಸ್ಯೆ ಸೃಷ್ಟಿಯಾಗಿ ಆದಾಯಕ್ಕೆ ಸಮಸ್ಯೆ ಆಗಿದ್ದರೂ ಮದ್ಯ ಸರ್ಕಾರದ ಕೈ ಹಿಡಿದಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ನಿರೀಕ್ಷಿತ ಗುರಿಯನ್ನು ಸಾಧಿಸುವ ವಿಶ್ವಾಸವನ್ನು ಹೊಂದಿದೆ.
ಹೌದು. 2020-21ರ ಸಾಲಿನಲ್ಲಿ ಅಬಕಾರಿ ಇಲಾಖೆಗೆ 22,700 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯ ಗುರಿಯನ್ನು ನಿಗದಿ ಪಡಿಸಲಾಗಿತ್ತು. ಈ ಪೈಕಿ ಫೆಬ್ರವರಿ ಅಂತ್ಯಕ್ಕೆ 20,900 ಕೋಟಿ ರಾಜಸ್ವ ಸಂಗ್ರಹವಾಗಿದ್ದು, ನಿಗದಿತ ಗುರಿಯನ್ನು ಸಾಧಿಸಬಹುದು ಎಂಬ ನಿರೀಕ್ಷೆಯನ್ನು ನಾವು ಹೊಂದಿದ್ದೇವೆ ಎಂದು ಯಡಿಯರೂಪ್ಪ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
Advertisement
Advertisement
2021-22ನೇ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 24,580 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿ ಪಡಿಸಲಾಗಿದೆ.