ರಾಯ್ಪುರ: ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಗಳಿಗೆ ಅಧಿಕಾರಿಗಳು ಥಳಿಸುತ್ತಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಇಂಥಹದ್ದೇ ಘಟನೆ ಛತ್ತೀಸ್ ಗಢದದಲ್ಲಿ ನಡೆದಿದ್ದು, ಜಿಲ್ಲಾಧಿಕಾರಿಯನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ.
सोशल मीडिया के माध्यम से सूरजपुर कलेक्टर रणबीर शर्मा द्वारा एक नवयुवक से दुर्व्यवहार का मामला मेरे संज्ञान में आया है।
यह बेहद दुखद और निंदनीय है। छत्तीसगढ़ में इस तरह का कोई कृत्य कतई बर्दाश्त नहीं किया जाएगा।
कलेक्टर रणबीर शर्मा को तत्काल प्रभाव से हटाने के निर्देश दिए हैं।
— Bhupesh Baghel (@bhupeshbaghel) May 23, 2021
Advertisement
ಸೂರಜ್ ಪುರ ಜಿಲ್ಲೆಯ ಜಿಲ್ಲಾಧಿಕಾರಿ ಕೋವಿಡ್-19 ನಿಯಮ ಉಲ್ಲಂಘನೆ ಮಾಡಿದ ವ್ಯಕ್ತಿಯನ್ನು ಥಳಿಸಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಅಧಿಕಾರಿ ಕ್ಷಮೆ ಕೋರಿದ್ದಾರೆ.
Advertisement
IAS Association strongly condemns the behaviour of Collector Surajpur, Chhattisgarh. It is unacceptable & against basic tenets of service & civility. Civil servants must have empathy &provide healing touch to society at all times, more so in these difficult times: IAS Association
— ANI (@ANI) May 23, 2021
Advertisement
ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಲ್ಲಿದೆ. ಆದರೆ ಅಮಾನ್ ಮಿತ್ತಲ್ (23) ಲಾಕ್ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಕ್ಕಾಗಿ ಅಧಿಕಾರಿಗಳು ಆತನನ್ನು ತಡೆದಿದ್ದರು. ತಾನು ಸಂಚರಿಸುತ್ತಿರುವುದಕ್ಕೆ ಕಾರಣ ಹೇಳಲು ಯತ್ನಿಸುತ್ತಿದ್ದ ಯವಕ ಮೊಬೈಲ್ ಫೋನ್ ಹಾಗೂ ಕಾಗದವನ್ನು ತೋರಿಸುತ್ತಿದ್ದದ್ದು ವೀಡಿಯೋದಲ್ಲಿ ದಾಖಲಾಗಿದೆ. ಆದರೆ ಅಧಿಕಾರಿ ಅದನ್ನು ಕಸಿದುಕೊಂಡು ಎಸೆದಿರುವುದು ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ.
Advertisement
Chhattisgarh | In a viral video, Surajpur District Collector Ranbir Sharma was seen slapping a person and slamming his phone on the ground, for allegedly violating #COVID19 lockdown guidelines pic.twitter.com/z4l0zkdy7C
— ANI (@ANI) May 22, 2021
ಈ ಬೆನ್ನಲ್ಲೇ ಹಿರಿಯ ಅಧಿಕಾರಿಯೊಬ್ಬರು ಯುವಕನನ್ನು ಥಳಿಸಲು ಪ್ರಾರಂಭಿಸಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳಿಗೂ ಥಳಿಸುವಂತೆ ಹೇಳಿದ್ದಾರೆ. ಪರಿಣಾಮ ಯುವಕನಿಗೆ ಅಧಿಕಾರಿಗಳು ದೊಣ್ಣೆಯಿಂದ ಹೊಡೆದಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಜಿಲ್ಲಾಧಿಕಾರಿ ರಣ್ ಬೀರ್ ಶರ್ಮಾ ಲಾಕ್ಡೌನ್ ನಿಯಮ ಉಲ್ಲಂಘಿಸಿದ ಯುವಕನೋರ್ವನಿಗೆ ಥಳಿಸುತ್ತಿರುವ ವೀಡಿಯೋ ವೈರಲ್ ಆಗತೊಡಗಿದೆ. ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.
He said he was out for vaccination but there was no proper document. Later, he said he was going to visit his grandmother. I slapped him in heat of moment when he misbehaved. He was 23-24 y/o & not 13. I regret & apologise for my behaviour: Surajpur Dist Collector #Chhattisgarh pic.twitter.com/myfhgPjTm0
— ANI (@ANI) May 22, 2021
ಈ ಸಾಂಕ್ರಾಮಿಕದ ಅವಧಿಯಲ್ಲಿ ಸೂರಜ್ ಪುರ ಜಿಲ್ಲೆ ಅಪಾರ ಪ್ರಮಾಣದ ಜೀವ ಹಾನಿಯನ್ನು ಕಂಡಿದೆ. ಈ ಸಮಸ್ಯೆಯನ್ನು ನಿಭಾಯಿಸುವುದಕ್ಕಾಗಿ ನಾವು ರಾಜ್ಯ ಸರ್ಕಾರದ ಅಧಿಕಾರಿಗಳು ಶ್ರಮಿಸುತ್ತಿದ್ದೇವೆ ಎಂದು ತಮ್ಮ ಹೇಳಿಕೆಯಲ್ಲಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಸೂರಜ್ಪುರ ಜಿಲ್ಲಾಧಿಕಾರಿ ರಣಬೀರ್ ಶರ್ಮಾ ಅವರು ಯುವಕನ ಮೇಲೆ ವರ್ತಿಸಿದ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಇದು ತುಂಬಾ ದುಃಖಕರ ಮತ್ತು ಖಂಡನೀಯ. ಛತ್ತೀಸ್ಗಢದಲ್ಲಿ ನಡೆಯುವ ಅಂತಹ ಯಾವುದೇ ಕೃತ್ಯವನ್ನು ಸಹಿಸುವುದಿಲ್ಲ. ಜಿಲ್ಲಾಧಿಕಾರಿ ರಣಬೀರ್ ಶರ್ಮಾ ಅವರನ್ನು ತಕ್ಷಣ ಕರ್ತವ್ಯದಿಂದ ತಗೆದು ಹಾಕುವಂತೆ ಸೂಚನೆ ನೀಡಲಾಗಿದೆ ಎಂದು ಛತ್ತೀಸ್ಗಢ ಸಿಎಂ ಭೂಪೇಶ್ ಬಘೇಲ್ ಟ್ವೀಟ್ ಮಾಡಿದ್ದಾರೆ.