ನವದೆಹಲಿ: ಕೊರೊನಾ ನಿಯಮ ಉಲ್ಲಂಘಿಸಿದರೆ ಸಾರ್ವಜನಿಕ ಸಭೆ, ರ್ಯಾಲಿಗಳನ್ನು ನಿಷೇಧಿಸುವುದಕ್ಕೆ ಹಿಂದೇಟು ಹಾಕುವುದಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
Advertisement
ದೇಶದೆಲ್ಲೆಡೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಮಧ್ಯೆ, ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೆ ಪ್ರಮುಖ ಪ್ರಚಾರಕರು, ರಾಜಕಾರಣಿಗಳು ಚುನಾವಣಾ ರ್ಯಾಲಿಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
Advertisement
Advertisement
ಕೊರೊನಾ ನಿಯಮ ಉಲ್ಲಂಘಿಸಿ ನಡೆಯುವ ಸಾರ್ವಜನಿಕ ಸಭೆ, ರ್ಯಾಲಿಗಳನ್ನು ನಿಷೇಧಿಸುವುದಕ್ಕೆ ಹಿಂದೇಟು ಹಾಕುವುದಿಲ್ಲ, ಕೋವಿಡ್-19 ನಿಯಮ ಉಲ್ಲಂಘಿಸುವ ಅಭ್ಯರ್ಥಿಗಳು, ರಾಜಕೀಯ ನಾಯಕರು ಮತ್ತು ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ನಾಯಕರು, ಅಭ್ಯರ್ಥಿಗಳು ರ್ಯಾಲಿಗಳಲ್ಲಿ ಭಾಗವಹಿಸುವ ಜನರನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ. ನಿಯಮವನ್ನು ಗಾಳಿಗೆ ತೂರಲಾಗುತ್ತಿದೆ, ಚುನಾವಣಾ ಆಯೋಗದ ನಿಯಮಗಳನ್ನು ಧಿಕ್ಕರಿಸಲಾಗುತ್ತಿದೆ. ವೇದಿಕೆಗಳಲ್ಲಿ ಇರುವಾಗ ಮಾಸ್ಕ್ ಧರಿಸುತ್ತಿಲ್ಲ ಎಂದು ಆಯೋಗ ಪತ್ರದಲ್ಲಿ ವಿವರಿಸಿದೆ.
Advertisement
ನಿನ್ನೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದ್ದ ದೆಹಲಿ ಹೈಕೋರ್ಟ್ ರಾಜಕೀಯ ರ್ಯಾಲಿಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಬಗ್ಗೆ ಪ್ರತಿಕ್ರಿಯೆ ಕೇಳಿತ್ತು.