ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಚಿಕ್ಕಮ್ಮ ಕೋವಿಡ್ 19 ನಿಂದಾಗಿ ಮೃತಪಟ್ಟಿದ್ದಾರೆ.
ನರ್ಮದಾಬೆನ್ ಮೋದಿ(80) ಅವರನ್ನು ಹತ್ತು ದಿನಗಳ ಹಿಂದೆ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಮೃತಪಟ್ಟಿದ್ದಾರೆ.
Advertisement
Advertisement
ಸೋಂಕು ಬಂದ ನಂತರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಹತ್ತು ದಿನಗಳ ಹಿಂದೆ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪ್ರಧಾನ ಮಂತ್ರಿ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಹೇಳಿದ್ದಾರೆ.
Advertisement
ಪ್ರಧಾನಿ ತಂದೆ ದಾಮೋದರ್ದಾಸ್ ಅವರ ಸಹೋದರ ಪತಿ ಜಗ ಜೀವನ್ ದಾಸ್ ಹಲವು ವರ್ಷಗಳ ಹಿಂದೆ ನಿಧನ ಹೊಂದಿದ್ದರು ಎಂದು ಪ್ರಹ್ಲಾದ್ ಮೋದಿ ತಿಳಿಸಿದರು.