ತುಮಕೂರು: ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಕಂಗನಾ ಅವರು ಟ್ವಿಟರ್ ನಲ್ಲಿ ರೈತರನ್ನ ಭಯೋತ್ಪಾದಕರು ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್, ಜೆಎಂಎಫ್ಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ನಿರ್ದೇಶನ ಮೇರೆಗೆ ನಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Advertisement
Advertisement
ಕೇಂದ್ರ ಸರ್ಕಾರ ಜಾರಿ ತಂದಿದ್ದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದರು. ಹಲವು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಬಂದ್ಗೆ ಕರೆ ನೀಡಿದ್ದರು. ಅಲ್ಲದೆ ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿತ್ತು. ಈ ಪ್ರತಿಭಟನೆ ಕುರಿತು ಕಂಗನಾ ರಣಾವತ್ ಟ್ವೀಟ್ ಮಾಡಿ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಈ ಟ್ವೀಟ್ ಭಾರೀ ವಿವಾದ ಹುಟ್ಟಿಸಿತ್ತು.
Advertisement
Advertisement
ಈ ಸಂಬಂಧ ಹೈಕೋರ್ಟ್ ವಕೀಲ ರಮೇಶ್ ನಾಯಕ್ ಖಾಸಗಿ ದೂರು ದಾಖಲಿಸಿದ್ದು, ಸಂಸತ್ತಿನಲ್ಲಿ ಕೃಷಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕಂಗನಾ ಟ್ವಿಟ್ಟರ್ ನಲ್ಲಿ ಅಪಮಾನಿಸಿದ್ದಾರೆ. ಇದರಿಂದ ಲಕ್ಷಾಂತರ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ನ್ಯಾಯಾಲಯದಲ್ಲಿ ಪಿಸಿಆರ್ ಕ್ರಿಮಿನಲ್ ದೂರನ್ನು ದಾಖಲಿಸಿದ್ದರು.
ಕಂಗನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದರು. ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಲು ಜಿಲ್ಲಾ ಪ್ರಧಾನ ಮತ್ತು ನ್ಯಾಯಾಧೀಶರಿಗೆ ಅನುಮತಿ ಕೋರಿದ್ದರು. ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಸೂಚಿಸಿತ್ತು.