
ಬೆಂಗಳೂರು: ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ಕೋವಿಡ್ 19 ಲಸಿಕೆಯನ್ನು ಪಡೆದಿದ್ದಾರೆ. ನಗರದ ಜಯದೇವ ಆಸ್ಪತ್ರೆಯಲ್ಲಿ ಎಚ್ಡಿ ಕುಮಾರಸ್ವಾಮಿ ಅವರಿಗೆ ಲಸಿಕೆ ನೀಡಲಾಯಿತು.
Advertisements
ಈಗಾಗಲೇ ಹಲವು ಗಣ್ಯರು ಕೋವಿಡ್ ಲಸಿಕೆಯನ್ನು ಪಡೆದಿದ್ದಾರೆ. ಇಂದು ಸಿದ್ದಗಂಗಾ ಶ್ರೀಗಳು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗಾ ಮಠದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಲಸಿಕೆಯನ್ನು ಪಡೆದರು.
Advertisements
ಕೆಲ ದಿನಗಳ ಹಿಂದೆ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಕೊರೊನಾ ಲಸಿಕೆ ಪಡೆದುಕೊಂಡು, ಸಾರ್ವಜನಿಕರು ವ್ಯಾಕ್ಸಿನ್ ತೆಗೆದುಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.
Advertisements