– ಯಶಸ್ವಿ 25 ದಿನ ಪೂರೈಸಿದ ‘ಆಕ್ಟ್ 1978’
ಕೊರೊನಾ ಲಾಕ್ಡೌನ್ ಬಳಿಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ತರುವಲ್ಲಿ ಯಶಸ್ವಿಯಾದ ಮಂಸೋರೆ ನಿರ್ದೇಶನದ ‘ಆಕ್ಟ್ 1978’ ಚಿತ್ರ 25 ದಿನ ಪೂರೈಸಿದ ಖುಷಿಯಲ್ಲಿದೆ. ನವೆಂಬರ್ 20ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದ ‘ಆಕ್ಟ್ 1978’ ಚಿತ್ರ ಮೊದಲ ದಿನವೇ ಪ್ರೇಕ್ಷಕರು ಹಾಗೂ ವಿಮರ್ಶಕರ ಮನಸ್ಸನ್ನು ಗೆದ್ದಿತ್ತು. ಕೊರೊನಾ ನಡುವೆಯೂ ಚಿತ್ರಮಂದಿರದಲ್ಲೇ ಸಿನಿಮಾ ವೀಕ್ಷಿಸಿ, ಮೆಚ್ಚಿ 25 ದಿನಗಳ ಗೆಲುವನ್ನು ದಾಖಲಿಸಲು ಸಹಕರಿಸಿದ ಪ್ರೇಕ್ಷಕ ಪ್ರಭುಗಳಿಗೆ ಚಿತ್ರತಂಡ ಧನ್ಯವಾದ ತಿಳಿಸಿದೆ.
Advertisement
ದಕ್ಷಿಣ ಭಾರತೀಯ ಚಿತ್ರರಂಗದಲ್ಲೇ ಲಾಕ್ಡೌನ್ ಬಳಿಕ ಮೊದಲ ಬಾರಿ ಬಿಡುಗಡೆಯಾದ ಕನ್ನಡ ಸಿನಿಮಾ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದ ‘ಆಕ್ಟ್ 1978’ ಚಿತ್ರ ಇದೀಗ ಕೊರೊನಾ ಮಹಾಮಾರಿ ನಡುವೆಯೂ ಯಶಸ್ವಿ 25 ದಿನಗಳನ್ನು ಪೂರೈಸಿದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಚಿತ್ರಕ್ಕೆ ಸಿಕ್ಕ ಗೆಲುವು ಹಾಗೂ ಪ್ರತಿಕ್ರಿಯೆಯಿಂದ ಚಿತ್ರತಂಡ ಖುಷಿಯಾಗಿದ್ದು ಐವತ್ತು ದಿನಗಳ ಸಂಭ್ರಮದತ್ತ ಎದುರು ನೋಡುತ್ತಿದೆ.
Advertisement
Advertisement
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ನಿರ್ದೇಶನದ ಮೂರನೇ ಸಿನಿಮಾ ಇದಾಗಿದ್ದು, ಸೋಶಿಯಲ್ ಥ್ರಿಲ್ಲರ್ ಸಬ್ಜೆಕ್ಟ್ ಇರುವ ಚಿತ್ರಕ್ಕೆ ಸಿನಿರಸಿಕರಲ್ಲದೆ ಚಿತ್ರರಂಗದ ಗಣ್ಯರು ಕೂಡ ಸಿನಿಮಾ ನೋಡಿ ಭೇಷ್ ಎಂದಿದ್ದರು. ಸೋಶಿಯಲ್ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡಿರುವ ಚಿತ್ರದಲ್ಲಿ ಯಜ್ಞಾ ಶೆಟ್ಟಿ ಅಮೋಘ ಅಭಿನಯ ಎಲ್ಲರ ಮನಸೆಳೆದಿತ್ತು. ಇನ್ನು ಅಚ್ಯುತ್ ಕುಮಾರ್, ಸುಧಾ ಬೆಳವಾಡಿ, ಪ್ರಮೋದ್ ಶೆಟ್ಟಿ, ಕೃಷ್ಣ ಹೆಬ್ಬಾಳೆ, ದತ್ತಣ್ಣ, ಸಂಚಾರಿ ವಿಜಯ್, ಶರಣ್ಯ, ಶ್ರುತಿ ಒಳಗೊಂಡಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ‘ಆಕ್ಟ್ 1978’ ದೇವರಾಜ್.ಆರ್ ನಿರ್ಮಾಣದಲ್ಲಿ ಮೂಡಿ ಬಂದಿದ್ದು, ಚಿತ್ರಕ್ಕೆ ಖ್ಯಾತ ಛಾಯಾಗ್ರಾಹಕ ಸತ್ಯ ಹೆಗ್ಡೆ ಕ್ಯಾಮೆರಾ ನಿರ್ದೇಶನವಿದೆ.
Advertisement