ಮುಂಬೈ: ಕೋವಿಡ್ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಮೇಲೆ ವಾರ್ಡ್ಬಾಯ್ನನ್ನು ಬಂಧಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಆಸ್ಪತ್ರೆಗೆ ದಾಖಲಾದ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಾಸೈನ ಮಾಣಿಕ್ಪುರ್ ಪೊಲೀಸರು ಕೋವಿಡ್-19 ಆಸ್ಪತ್ರೆಯ ವಾರ್ಡ್ ಹುಡುಗನನ್ನು ಬಂಧಿಸಿದ್ದಾರೆ.
Advertisement
Advertisement
ಆರೋಪಿಯನ್ನು ರೋಹಿತ್ ರಾಜ್ಭರ್(29) ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಮಹಿಳೆ ನಿದ್ದೆ ಮಾಡುವಾಗ ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದಾನೆ. ಕೆಲವು ದಿನಗಳ ನಂತರ ಮಹಿಳೆ ಡಿಸ್ಚಾರ್ಜ್ಆಗಿ ಮನೆಗೆ ಹೋಗಿದ್ದಾರೆ. ಆಗ ಆರೋಪಿ ಫೋಟೋಗಳು ಮತ್ತು ವಿಡಿಯೋಗಳನ್ನು ವಾಟ್ಸಾಪ್ ನಲ್ಲಿ ಕಳುಹಿಸಲು ಪ್ರಾರಂಭಿಸಿದ್ದಾನೆ. ಈ ವೇಳೆ ಮಹಿಳೆಗೆ 10 ಲಕ್ಷ ರೂಪಾಯಿ ನೀಡದಿದ್ದರೆ ಫೋಟೋ ಮತ್ತು ವಿಡಿಯೋ ಕ್ಲಿಪ್ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವುದಾಗಿ ರಾಜ್ಭರ್ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
Advertisement
ಮಹಿಳೆ ತನ್ನ ಕುಟುಂಬ ಸದಸ್ಯರಿಗೆ ತಿಳಿಸಿ ಪೊಲೀಸ್ ದೂರು ನೀಡಬೇಕೆಂದು ಪೋಷಕರಿಗೆ ಒತ್ತಾಯಿಸಿದ್ದಾರೆ. ಆಸ್ಪತ್ರೆಯ ವಾರ್ಡ್ಬಾಯ್ ಅಶ್ಲೀಲ ವಿಡಿಯೋಗಳನ್ನು ತಯಾರಿಸಿದ್ದಾನೆ. ಡಿಸ್ಚಾರ್ಜ್ ಆಗಿ ನಾನು ಆಸ್ಪತ್ರೆಯಿಂದ ಬಂದ ನಂತರ ನನ್ನನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾನೆ ಎಂದು ಮಹಿಳೆ ಆರೋಪಿಸಿ ರಾಜ್ಭರ್ ವಿರುದ್ಧ ಮಾಣಿಕ್ಪುರ ಪೊಲೀಸರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ವಿಭಾಗಗಳ ಸೆಕ್ಷನ್ 354 ಎ (3) (ಲೈಂಗಿಕ ಕಿರುಕುಳ), 385 (ಸುಲಿಗೆ) ಮತ್ತು 504 (ಶಾಂತಿಯನ್ನು ಉಲ್ಲಂಘಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಮಾಣಿಕ್ಪುರ ಪೊಲೀಸ್ ಠಾಣೆಯ ಹಿರಿಯ ತನಿಖಾಧಿಕಾರಿ ರಾಜೇಂದ್ರ ಕಾಂಬ್ಳೆ ಹೇಳಿದ್ದಾರೆ.