– ಮುಖ್ಯಮಂತ್ರಿ ಬಿಎಸ್ವೈ ಸಂತಾಪ
ಬೆಂಗಳೂರು: ಕನ್ನಡದ ಜನಪ್ರಿಯ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ(84) ಶನಿವಾರ ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
Advertisement
ಹಲವು ದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರು ಇಂದು ಮುಂಜಾನೆ ಸುಮಾರು 4.45ಕ್ಕೆ ತಮ್ಮ ಬನಶಂಕರಿ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕದಲ್ಲಿ ಇವರು ಮಾಡಿದ ಸಾಧನೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಲಭಿಸಿದೆ.
Advertisement
Advertisement
ಖ್ಯಾತ ಕವಿ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಬಿಎಸ್ವೈ, ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟ’ರು, ‘ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವರು ಪ್ರಕಾರಗಳಲ್ಲಿ ಸಾಹಿತ್ಯ ಕೃಷಿ ಮಾಡಿ ವ್ಯಾಪಕ ಮನ್ನಣೆ ಪಡೆದಿದ್ದಾರೆ. ಅವರ ಜನಪ್ರಿಯ ಭಾವಗೀತೆಗಳಿಂದ ಕನ್ನಡಿಗರ ಮನೆ ಮಾತಾಗಿದ್ದರು ಎಂದಿದ್ದಾರೆ.
Advertisement
ಖ್ಯಾತ ಕವಿ ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಭಾವಗೀತೆ, ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವಾರು ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿ ಕನ್ನಡಿಗರ ಮನೆ ಮಾತಾಗಿದ್ದರು. (1/2)
— CM of Karnataka (@CMofKarnataka) March 6, 2021
ಅಲ್ಲದೆ ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರದ ತಾರೆಯೊಂದು ಕಳಚಿದಂತಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬವರ್ಗ ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. (2/2)
— CM of Karnataka (@CMofKarnataka) March 6, 2021
ಸದ್ಯ ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರ ಅಗಲಿಕೆಯಿಂದ ಸಾಹಿತ್ಯಲೋಕಕ್ಕೆ ತುಂಬಲಾರದ ನಷ್ಟ ಉಂಟಾಗಿದೆ.