ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಪುಂಡರಿಗಾಗಿ ಖಾಕಿಗಳ ಬೇಟೆ ಮುಂದುವರಿದಿದೆ. ಸಿಸಿಟಿವಿ, ಮೊಬೈಲ್ ವಿಡಿಯೋ ಹಾಗೂ ಈಗಾಗಲೇ ಬಂಧಿತರಾಗಿರುವ ಆರೋಪಿಗಳಿಂದ ಮಾಹಿತಿ ಕಲೆಹಾಕಿ ಮಿಡ್ನೈಟ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಳೆದ ರಾತ್ರಿ ಕೂಡ ಪೊಲೀಸರು ಒಟ್ಟು 35 ಮಂದಿ ಪುಂಡರನ್ನು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ 340ಕ್ಕೆ ಏರಿಕೆಯಾಗಿದೆ. ತಡರಾತ್ರಿ ಗಲಭೆಕೋರರಿಗೆ ಡಿಜೆ ಹಳ್ಳಿ ಪೊಲೀಸರು ಬೇಟೆ ಮುಂದುವರಿಸಿದ್ದು, 10 ಮಂದಿಯನ್ನು ಬಂಧಿಸಿದ್ದಾರೆ. ಇವರು ಗಲಭೆ ಬಳಿಕ ತಲೆಮರೆಸಿಕೊಂಡಿದ್ದರು.
Advertisement
Advertisement
ಕಳೆದ ಮೂರ್ನಾಲ್ಕು ದಿನಗಳಿಂದ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ. ಸಿಸಿಬಿ ಪೊಲೀಸರು ಕೂಡ ತಡರಾತ್ರಿ ಮತ್ತೆ 25 ಮಂದಿ ಆರೋಪಿಗಳು ಬಂಧಿಸಿದ್ದಾರೆ. ಹೀಗಾಗಿ ಒಟ್ಟು 35 ಮಂದಿ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
Advertisement
ಕಾರ್ಪೊರೇಟರ್ ಖಲೀಂಪಾಷಾ ಸೇರಿದಂತೆ, 7 ಮಂದಿಯನ್ನಷ್ಟೇ ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 64 ಮಂದಿಯನ್ನು ಕೋರ್ಟ್ ಮುಂದೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇವತ್ತು ರಾತ್ರಿ ಮತ್ತು ನಾಳೆಯೂ ಕಾರ್ಯಾಚರಣೆ ಮುಂದುವರಿಯಲಿದ್ದು, ಒಟ್ಟು 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ.