ನವದೆಹಲಿ: ಗಾಂಧಿಯೇತರ ವ್ಯಕ್ತಿಗಳು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲೇಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಅಮೆರಿಕದ ಶಿಕ್ಷಣ ತಜ್ಞರಾದ ಪ್ರದೀಪ್ ಚಿಬ್ಬರ್ ಮತ್ತು ಹರ್ಷ್ ಷಾ ಬರೆದ ‘ಇಂಡಿಯಾ ಟುಮಾರೊ: ಮುಂದಿನ ತಲೆಮಾರಿನ ರಾಜಕೀಯ ನಾಯಕರೊಂದಿಗೆ ಸಂಭಾಷಣೆಗಳು’ ಪುಸ್ತಕದಲ್ಲಿ ಪ್ರಿಯಾಂಕಾ ಗಾಂಧಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
Advertisement
Advertisement
ಕಳೆದ ವರ್ಷ ಸಹೋದರ ರಾಹುಲ್ ಗಾಂಧಿ ಅವರು ಗಾಂಧಿಯೇತರ ವ್ಯಕ್ತಿಗಳು ಪಕ್ಷದ ಮುಖ್ಯಸ್ಥರಾಗಬೇಕು ಎಂದು ಹೇಳಿದ್ದರು. ಈ ಅಭಿಪ್ರಾಯಕ್ಕೆ ನನ್ನ ಒಪ್ಪಿಗೆ ಇತ್ತು ಎಂದು ತಿಳಿಸಿದ್ದಾರೆ.
Advertisement
ಲೋಕಸಭಾ ಚುನಾವಣೆಯ ಬಳಿಕ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ತಾಯಿ ಸೋನಿಯಾ ಗಾಂಧಿ ಅಧ್ಯಕ್ಷೆಯಾಗಿ ಮತ್ತೆ ನೇಮಕವಾದರು. ಈಗ ರಾಹುಲ್ ಅಥವಾ ಪ್ರಿಯಾಂಕಾ ಗಾಂಧಿಗೆ ಮತ್ತೆ ಅಧ್ಯಕ್ಷ ಸ್ಥಾನವನ್ನು ನೀಡಬೇಕೆಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ. ಈ ಸಮಯದಲ್ಲೇ ಪ್ರಿಯಾಂಕಾ ಗಾಂಧಿಯ ಹೇಳಿದ ಮಾತು ಮುನ್ನೆಲೆಗೆ ಬಂದಿದೆ.
Advertisement
ಈ ಬಗ್ಗೆ ಕಾಂಗ್ರೆಸ್ ನಾಯಕರೊಬ್ಬರು ಪ್ರತಿಕ್ರಿಯಿಸಿ, 15 ತಿಂಗಳ ಹಿಂದೆ ಪ್ರಿಯಾಂಕಾ ಗಾಂಧಿ ಈ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ. ಲೇಖಕರು 2019ರ ಜುಲೈನಲ್ಲಿ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಆಗಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿದ್ದಕ್ಕೆ ನೈತಿಕ ಹೊಣೆಯನ್ನು ಹೊತ್ತು ರಾಹುಲ್ ಗಾಂಧಿ ಮೇ 25 ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕಳೆದ ವರ್ಷ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ, ಕೆಲ ನಾಯಕರಿಗೆ ಪಕ್ಷಕ್ಕಿಂತ ಮಕ್ಕಳ ಮೇಲಿನ ಆಸಕ್ತಿಯೇ ಹೆಚ್ಚಾದ ಪರಿಣಾಮ ನಮಗೆ ಸೋಲಾಗಿದೆ. ಸರಿಯಾಗಿ ಕೆಲಸ ಮಾಡದ್ದಕ್ಕೆ ಗೆಲ್ಲಬಹುದಾಗಿದ್ದ ಹಿರಿಯ ನಾಯಕರು ಸೋತಿದ್ದಾರೆ ಎಂದು ಟೀಕಿಸಿದ್ದರು.
ಸದ್ಯ ಕಾಂಗ್ರೆಸ್ ನಾಯಕರ ಮಧ್ಯೆ ಅಧ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಗೊಂದಲವಿದೆ. ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್, ತಿರುವನಂತಪುರದದ ಸಂಸದ ಶಶಿ ತರೂರ್ ಪ್ರಿಯಾಂಕಾ ಪರ ಒಲವು ವ್ಯಕ್ತಪಡಿಸಿದ್ದಾರೆ.
ಮನೀಶ್ ತಿವಾರಿ ಸೇರಿದಂತೆ ಕೆಲ ನಾಯಕರು ಪಕ್ಷದ ಒಳಗಡೆ ಒಂದು ಚುನಾವಣೆ ನಡೆಸಿ ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೋನಿಯಾ ಗಾಂಧಿ ಅವರು ನಾನು ಪೂರ್ಣಾವಧಿಗೆ ಅಧ್ಯಕ್ಷೆ ಸ್ಥಾನದಲ್ಲಿ ಇರುವುದಿಲ್ಲ. ಮುಂದಿನ ಅಧ್ಯಕ್ಷರ ನೇಮಕದವರೆಗೆ ಹಂಗಾಮಿಯಾಗಿ ಮುಂದುವರಿಯುತ್ತೇನೆ ಎಂದು ತಿಳಿಸಿದ್ದರು.
ಈಗ ಪ್ರಿಯಾಂಕಾ ಗಾಂಧಿ ಹೇಳಿಕೆಯಿಂದ ಮುಂದೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಗಾಂಧಿ ಕುಟುಂಬದ ಸದಸ್ಯರಿಗೆ ಸಿಗುತ್ತದೋ ಅಥವಾ ಹೊರಗಿನವರಿಗೆ ಸಿಗುತ್ತದೋ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.