ಬೆಂಗಳೂರು: ರಾಜ್ಯ ಗೃಹ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ.
ಕೊರೊನಾ ರಾಜಕಾರಣಿಗಳನ್ನು ಬೆನ್ನುಬಿಡದೆ ಕಾಡುತ್ತಿದೆ. ಇಂದು ಬೆಳಗ್ಗೆ ತಾನೇ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ನನಗೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ಸತಃ ಬೊಮ್ಮಾಯಿಯವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ.
Advertisement
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.#COVID19India
— Basavaraj S Bommai (@BSBommai) September 16, 2020
Advertisement
ಈ ವಿಚಾರವಾಗಿ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು, ನನಗೂ ಸಹ ಸೋಂಕು ಪಾಸಿಟಿವ್ ಬಂದಿದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
Advertisement
ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ.
— Basavaraj S Bommai (@BSBommai) September 16, 2020
Advertisement
ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಅವರು, ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದಿದ್ದಾರೆ. ಬಸವರಾಜ್ ಬೊಮ್ಮಾಯಿಯವರು ನಾಳೆ ಸಿಎಂ ಯಡಿಯೂರಪ್ಪ ಅವರ ಜೊತೆ ದೆಹಲಿಗೆ ತೆರಳಬೇಕಿತ್ತು. ಆದರೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.