Connect with us

Chikkaballapur

ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ ಸೆಂಚೂರಿ ಬಾರಿಸಿದ ಕೊರೊನಾ

Published

on

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಒಂದೇ ದಿನ 107 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.

ಇಂದು 107 ಕೊರೊನಾ ಪ್ರಕಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 715ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 34, ಬಾಗೇಪಲ್ಲಿಯಲ್ಲಿ 20, ಚಿಂತಾಮಣಿಯಲ್ಲಿ 24, ಗೌರಿಬಿದನೂರಿನಲ್ಲಿ 16, ಶಿಡ್ಲಘಟ್ಟದಲ್ಲಿ 10 ಸೇರಿದಂತೆ ಗುಡಿಬಂಡೆಯಲ್ಲಿ 3 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಾದ್ಯಂತ ಕೊರೊನಾ ಮಹಾಮಾರಿ ವ್ಯಾಪಿಸಿದೆ.

ಒಟ್ಟು 715 ಕೊರೊನಾ ಪ್ರಕರಣಗಳ ಪೈಕಿ 355 ಸಕ್ರಿಯವಾಗಿದ್ದು, 340 ಮಂದಿ ಗುಣಮುಖವಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 20 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ತಾಂಡವಾಡುತ್ತಿದೆ.

Click to comment

Leave a Reply

Your email address will not be published. Required fields are marked *