ಹೈದರಾಬಾದ್: ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಕೆಳಗೆ ಬಿದ್ದ ವ್ಯಕ್ತಿ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ ಮಹಿಳಾ ಕಾನ್ಸ್ಟೇಬಲ್ ಉಳಿಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
Advertisement
ಘಟನೆ ಕುರಿತ ಸಣ್ಣ ವೀಡಿಯೋವನ್ನು ರೈಲ್ವೆ ಸಚಿವಾಲಯವು ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮಹಿಳಾ ಕಾನ್ಸ್ಟೇಬಲ್ ಕಾರ್ಯವನ್ನು ಶ್ಲಾಘಿಸಿದೆ. ಇದೀಗ ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದೆ.
Advertisement
ವೀಡಿಯೋನಲ್ಲಿ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲನ್ನು ಏರಲು ಮುಂದಾಗಿ ಕಾಲು ಜಾರಿ ಕೆಳಗೆ ಬೀಳುತ್ತಾನೆ. ಇದನ್ನು ಗಮನಿಸಿದ ಅಲ್ಲೇ ಇದ್ದ ಮಹಿಳಾ ಕಾನ್ಸ್ಟೇಬಲ್ ಒಬ್ಬರು ಕೂಡಲೇ ಓಡಿ ಹೋಗಿ ಕೆಳಗೆ ಬಿದ್ದ ಪ್ರಯಾಣಿಕನನ್ನು ಹಿಂದಕ್ಕೆ ಎಳೆದುಕೊಳ್ಳುತ್ತಾರೆ. ಸದ್ಯ ಮಹಿಳಾ ಕಾನ್ಸ್ಟೇಬಲ್ ನನ್ನು ಮೇರಿ ಸಾಹೇಲಿ ಎಂದು ಗುರುತಿಸಲಾಗಿದ್ದು, ಈಕೆ ಆರ್ಪಿಎಫ್ ಮಹಿಳಾ ಕಾನ್ಸ್ಟೇಬಲ್ ಆಗಿದ್ದಾರೆ.
Advertisement
Serving Humanity First:
An alert RPF woman constable of "Meri Saheli" team at Visakhapatnam Railway station rescued a passenger falling under a moving train.
The episode was caught on the body-worn camera of RPF personnel. pic.twitter.com/05FJvP8Xju
— Ministry of Railways (@RailMinIndia) February 10, 2021
Advertisement
ಒಟ್ಟಾರೆ ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯ ಪ್ರಾಣ ಉಳಿಸಿ ಮಾನವೀಯತೆ ಮೆರೆದಿರುವ ಮಹಿಳಾ ಕಾನ್ಸ್ಟೇಬಲ್ ವೀಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದ್ದು, ನೆಟ್ಟಿಗರು ವ್ಯಕ್ತಿಯ ಪ್ರಾಣವನ್ನು ಉಳಿಸಿದಕ್ಕಾಗಿ ಕಾನ್ಸ್ಟೇಬಲ್ ಗೆ ಧನ್ಯವಾದ ತಿಳಿಸುವುದರ ಜೊತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.