ಮಂಗಳೂರು: ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯಲ್ಲಿ ಗ್ಯಾಸ್ ಸೋರಿಕೆಯಾದ ಘಟನೆ ಮಂಗಳೂರಿನ ತೊಕ್ಕೊಟ್ಟು ಬಳಿ ನಡೆದಿದೆ. ನಗರದ ಬೈಕಂಪಾಡಿಯಿಂದ ಕೇರಳ ಕಡೆಗೆ ಅಡುಗೆ ಅನಿಲದ ಸಿಲಿಂಡರನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಗ್ಯಾಸ್ ಸೋರಿಕೆ ಕಾಣಿಸಿಕೊಂಡಿದೆ.
Advertisement
ಈ ವಿಚಾರ ಗೊತ್ತಾದ ತಕ್ಷಣ ಚಾಲಕ ಪರಿಶೀಲಿಸಿದ್ದು, ಒಂದು ಸಿಲಿಂಡರ್ ಸೋರಿಕೆ ಆಗಿರೋದು ಬೆಳಕಿಗೆ ಬಂದಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತುರ್ತು ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.