ಚಲಿಸ್ತಿದ್ದ ಲಾರಿಗೆ ಕಾರು ಡಿಕ್ಕಿ – ಇಬ್ಬರು ಸಾವು, ಮೂವರು ಗಂಭೀರ

ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನಲ್ಲಿ ನಡೆದಿದೆ.

ಕ್ಯಾದಿಗ್ಗೆರೆ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಸಾಯಿ (18) ಮತ್ತು ಸಂತೋಷ (40) ಮೃತ ದುರ್ದೈವಿಗಳು. ಮೃತರನ್ನು ಮಹಾರಾಷ್ಟ್ರದ ಪುಣೆ ಮೂಲದವರು ಎಂದು ಗುರುತಿಸಲಾಗಿದೆ.

- Advertisement -

ಕಾರಿನಲ್ಲಿ ಒಟ್ಟು ಐದು ಮಂದಿ ತಿರುಪತಿಯಿಂದ ಪುಣೆಗೆ ಹಿಂದಿರುಗುತ್ತಿದ್ದರು. ಆದರೆ ಈ ವೇಳೆ ಕ್ಯಾದಿಗ್ಗೆರೆ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಸಾಯಿ ಮತ್ತು ಸಂತೋಷ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

- Advertisement -

ಚಾಲಕ ಕೈಲಾಶ್, ದ್ರಾಕ್ಷಾಯಿಣಿ ಮತ್ತು ರೇಣುಶ್ರೀ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಘಟನೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -