ನವದೆಹಲಿ: ಚೀನಾಗೆ ಭಾರತೀಯ ಯೋಧರು ಪ್ರತ್ಯುತ್ತರ ನೀಡಿದ್ದು, ದಾಳಿಯಲ್ಲಿ ಚೀನಾದ 43 ಯೋಧರು ಬಲಿಯಾಗಿದ್ದಾರೆ.
ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ ಕನಿಷ್ಠ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲದೆ ಈ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
Advertisement
Indian intercepts reveal that Chinese side suffered 43 casualties including dead and seriously injured in face-off in the Galwan valley: Sources confirm to ANI pic.twitter.com/xgUVYSpTzs
— ANI (@ANI) June 16, 2020
Advertisement
ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಚೀನಾದ 43 ಮಂದಿ ಯೋಧರನ್ನು ಸೆದೆಬಡಿದಿದೆ. ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು ಎಲ್ಎಸಿ ಬಳಿ ಹಾರಾಟ ನಡೆಸಿವೆ ಎಂದು ವರದಿಯಾಗಿದೆ.
Advertisement
And exposed to sub-zero temperatures in the high altitude terrain have succumbed to their injuries, taking the total that were killed in action to 20. Indian Army is firmly committed to protect the territorial integrity and sovereignty of the nation: Indian Army (2/2) https://t.co/5duc0Jlfwb
— ANI (@ANI) June 16, 2020
Advertisement
ಇತ್ತ ಘರ್ಷಣೆ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತೀಯ ಸೇನೆ, ನಮ್ಮ ಮತ್ತು ಚೀನಾದ ಸೈನಿಕರು ಗಾಲ್ವಾನ್ ಪ್ರದೇಶದಿಂದ ಹೊರ ಬಂದಿದ್ದಾರೆ. ಆದರೆ ಜೂನ್ 15 ಹಾಗೂ 16ರಂದು ನಡೆದ ದಾಳಿಯಲ್ಲಿ 17 ಭಾರತೀಯ ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲದೆ ಒಟ್ಟು 20 ಮಂದಿ ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದೆ.
ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಸೇನೆಯೊಂದಿಗೆ ಚೀನಾದ ಸೈನಿಕರು ಹಿಂಸಾತ್ಮಕ ದಾಳಿ ನಡೆಸಿದ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾಗಿದ್ದರು. ಇದರಿಂದಾಗಿ ಇಂದು ಸೇನೆ ಪ್ರತಿಕಾರ ತಿರಿಸಿಕೊಂಡಿದೆ ಎಂದು ವರದಿಯಾಗಿದೆ.
At least 20 Indian soldiers killed in the violent face-off with China in Galwan valley in Eastern Ladakh. Casualty numbers could rise: Government Sources pic.twitter.com/PxePv8zGz4
— ANI (@ANI) June 16, 2020
ಸೋಮವಾರ ರಾತ್ರಿ ನಡೆದ ದಾಳಿಯಲ್ಲಿ ಕರ್ನಲ್ ಸಂತೋಷ್ ಬಾಬು ಹಾಗೂ ಇಬ್ಬರು ಯೋಧರು ಸಾವನ್ನಪ್ಪಿದ್ದರು. ಚೀನಾ ಕೂಡ ಸಾವು-ನೋವುಗಳನ್ನು ಅನುಭವಿಸಿತ್ತು. ಈ ಹಿಂದೆ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು.
Increase in Chinese chopper activity observed across the LAC to airlift casualties suffered by them during face-off with Indian troops in Galwan valley: Sources to ANI https://t.co/uMExblXYxq
— ANI (@ANI) June 16, 2020