ಬಾಗಲಕೋಟೆ: ಚೀನಾ ಬೇಹುಗಾರಿಕೆ ಪಟ್ಟಿಯಲ್ಲಿ ನನ್ನು ಹೆಸರು ಕೇಳಿ ಬಂದಿದ್ದು, ವಿದೇಶಿ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Advertisement
ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಇನ್ನೊಂದು ದೇಶದವರ ಬಗ್ಗೆ ಬೇಹುಗಾರಿಕೆ ಮಾಡುವುದು ಖಂಡನೀಯ. ಇಂತಹ ಬೇಹುಗಾರಿಕೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಬೇಕು. ಅವರನ್ನು ಪತ್ತೆ ಹಚ್ಚಿ ಬಲಿ ಹಾಕಬೇಕು. ಇದು ಕೇಂದ್ರ ಸರ್ಕಾರ ಮಾಡಬೇಕಾದ ಕೆಲಸ. ಇಂತಹ ಕೃತ್ಯ ನಡೆಯುವುದನ್ನು ತಡೆಯಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Advertisement
ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಬೇಕೆಂಬ ಕೂಗು ಕೇಳಿ ಬರುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈಗ ಸದ್ಯಕ್ಕೆ ನಾನು ಬಾದಾಮಿ ಶಾಸಕ. ಏನ್ರಿ ಚಿಮ್ಮನಕಟ್ಟಿ ಎಂದು ಬಾದಾಮಿ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ನೋಡಿ ನಗೆ ಚಟಾಕಿ ಹಾರಿಸಿದರು. ಅಲ್ಲದೆ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದರು.
Advertisement
Advertisement
ಬಾದಾಮಿ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎರಡನೇ ದಿನದ ಪ್ರವಾಸ ಮುಂದುವರಿಸಿದ್ದು, ಪಟ್ಟಣದಲ್ಲಿ ಕುಡಿಯುವ ನೀರಿನ ಕಾಮಗಾರಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಧಿಕಾರಿಗಳ ಜೊತೆಗೆ ಕಾಮಗಾರಿ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಶಾಸಕರ ಗೃಹ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಾಜಿ ಸಚಿವರಾದ ಬಿ.ಬಿ.ಚಿಮ್ಮನಕಟ್ಟಿ, ಎಚ್.ವೈ.ಮೇಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬಾಯಕ್ಕ ಮೇಟಿ ಮತ್ತಿತರರು ಇದ್ದರು.