– ಸಿದ್ದರಾಮಯ್ಯ, ಪರಮೇಶ್ವರ್ ಸಹ ಭಾಗಿ
ಬಳ್ಳಾರಿ: ಕೊರೊನಾ ಅಟ್ಟಹಾಸದ ನಡುವೆಯೂ ರಾಜಕಾರಣಿಗಳು ಅದ್ಧೂರಿ ವಿವಾಹ ಮಾಡುತ್ತಿದ್ದು, ಇದರಿಂದಾಗಿ ರಾಜಕಾರಣಿಗಳಿಗೊಂದು ನಿಯಮ, ಜನಸಾಮಾನ್ಯರಿಗೊಂದು ನಿಯಮವೇ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೂ ವಿಶೇಷವೆಂದರೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಹ ವಿವಾಹದಲ್ಲಿ ಭಾಗಿಯಾಗಿದ್ದಾರೆ.
Advertisement
ಜಿಲ್ಲೆಯ ಲಕ್ಷ್ಮೀಪುರದಲ್ಲಿ ನಡೆಯುತ್ತಿರುವ ಮಾಜಿ ಸಚಿವ, ಹಾಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್ ಪುತ್ರ ಅವಿನಾಶ್ ಮದುವೆಗೆ ಗಣ್ಯರ ದಂಡೇ ಆಗಮಿಸಿದ್ದು, ಅದ್ಧೂರಿಯಾಗಿ ಜಾತ್ರೆಯಂತೆ ವಿವಾಹ ಮಾಡಿದ್ದಾರೆ. ನೂನಾರು ಜನ ವಿವಾಹದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ ಸಚಿವ ಶ್ರೀರಾಮುಲು ಅವರು ಸ್ಟೇಜ್ ಮೇಲೆ ಹೋಗಿ ಕೈ ಕುಲುಕಿದ್ದಾರೆ. ಸಾಮಾಜಿಕ ಅಂತರ, ಮಾಸ್ಕ್ ಯಾವುದೂ ಇಲ್ಲದೆ ನೂರಾರು ಜನ ಸೇರಿದ ವಿವಾಹದಲ್ಲಿ ಪಾಲ್ಗೊಂಡಿದ್ದಾರೆ.
Advertisement
Advertisement
ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೆಲಿಕಾಪ್ಟರ್ ನಲ್ಲಿ ಮದುವೆಗೆ ಆಗಮಿಸಿದ್ದು, ಇದೇ ವೇಳೆ ಹೆಲಿಕಾಪ್ಟರ್ ನೋಡಲು ಜನ ಮುಗಿ ಬಿದ್ದಿದ್ದಾರೆ. ಸಾಮಾಜಿಕ ಅಂತರವಿಲ್ಲದೆ ಜನ ಜಾತ್ರೆಯಂತೆ ಸೇರಿದ್ದಾರೆ. ಕಾಂಗ್ರೆಸ್ ಮುಖಂಡರು ಸಹ ಸಾಮಾಜಿಕ ಅಂತರವಿಲ್ಲದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕೊರೊನೊಗೆ ಡೋಂಟ್ ಕೇರ್ ಎಂದು ಮದುವೆ ಕಾರ್ಯಕ್ರಮದಲ್ಲಿ ಜನಸ್ತೋಮವೇ ಸೇರಿದೆ.
Advertisement
ನೂರಾರು ಜನ ಸೇರಿದ ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಮೂಲಕ ಸಚಿವ ಶ್ರೀ ರಾಮುಲು, ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್ ನಾಯಕರು ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.