ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಲ್ಯಾಕ್ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಾದ ನರೇಶ್ ಗೌಡ ಮತ್ತು ಶ್ರವಣ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಶಂಕಿತರಾಗಿದ್ದ ನರೇಶ್ ಮತ್ತು ಶ್ರವಣ್ ಕಳೆದ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದಾರೆ. ಪೊಲೀಸರು ಈ ಇಬ್ಬರನ್ನು ಬಂಧಿಸಲು ವಿಶೇಷ ತಂಡ ರಚಿಸಿ ದಾಳಿ ಮಾಡಿದ್ದರು. ಪೊಲೀಸರ ಕೈಗೆ ಸಿಗದೇ ನಾಪತ್ತೆಯಾಗಿದ್ದ ಇಬ್ಬರು ಈಗ ನಿರೀಕ್ಷಣಾ ಜಾಮೀನಿನ ಮೊರೆ ಹೋಗಿದ್ದಾರೆ.
ರಮೇಶ್ ಜಾರಕಿಹೊಳಿ ಬ್ಲ್ಯಾಕ್ಮೇಲ್ ಕೇಸ್ ನ್ನು ನೀಡಿದ್ರು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ಪ್ರಕರಣದ ವಿಚಾರಣೆ ನಡೆಸುತ್ತಿದ್ರು. ಆದ್ರೆ ಎಷ್ಟು ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಇಂದು ಮಧ್ಯಾಹ್ನ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಅಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಸ್ವೀಕರಿಸಿದ ನ್ಯಾಯಾಲಯ ಮೇ 29 ತಾರೀಖಿಗೆ ವಿಚಾರಣೆ ನಿಗದಿ ಮಾಡಿದೆ.
ರಮೇಶ್ ಜಾರಕಿಹೊಳಿ ಕೇಸ್ಗೆ ಟ್ವಿಸ್ಟ್ – ಸಮ್ಮತಿಯಿಂದಲೇ ನಡೆದಿತ್ತಾ ಇಬ್ಬರ ನಡುವೆ ಸೆಕ್ಸ್?https://t.co/W7AZKrhOXH#RameshJarkiholi #CDCase #SIT #KannadaNews
— PublicTV (@publictvnews) May 24, 2021