– ಸ್ಫೋಟದ ತೀವ್ರತೆಗೆ 300 ಮೀ. ಹಾರಿದ ವ್ಯಕ್ತಿಯ ದೇಹ
– ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಪೋಟಕ
ಹಾಸನ: ಸ್ಫೋಟಕ ವಸ್ತುಗಳಿಂದಾಗಿ ರಾಜ್ಯದಲ್ಲಿ ಎಷ್ಟೆಲ್ಲ ಅನಾಹುತ ಸಂಭವಿಸಿದರೂ ಜನ, ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಯಲ್ಲಿ ಜಿಲೆಟಿನ್ ರೀತಿಯ ಸ್ಫೋಟಕ ಸಿಡಿದು ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.
ಸ್ಫೋಟಕ ವಸ್ತುಗಳನ್ನು ಅನ್ಲೋಡ್ ಮಾಡುವಾಗ ಘಟನೆ ಸಂಭವಿಸಿದೆ. ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಚಾಕೇನಹಳ್ಳಿ ಗ್ರಾಮದ ಸಮೀಪವೇ ಸ್ಫೋಟಕಗಳ ಗೋಡೋನ್ ಇದ್ದು, ಸ್ಫೋಟದ ತೀವ್ರತೆಗೆ ವ್ಯಕ್ತಿಯ ದೇಹ ಮುನ್ನೂರು ಮೀಟರ್ ಹಾರಿ ಹೋಗಿದೆ.
Advertisement
Advertisement
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಆಗಮಿಸಿದ್ದು, ಗೋಡೋನ್ನಲ್ಲಿ ಜಿಲೆಟಿನ್ ಕಡ್ಡಿ ಸೇರಿದಂತೆ ಇತರೆ ಸ್ಫೋಟಕ ವಸ್ತುಗಳು ತುಂಬಿವೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಎಎಸ್ಪಿ ನಂದಿನಿ ಭೇಟಿ ನೀಡಿದ್ದಾರೆ.
Advertisement
ಚಾಕೇನಹಳ್ಳಿಕಟ್ಟೆ ಸುತ್ತ ಅಕ್ರಮವಾಗಿ ಸ್ಫೋಟಕ ಸಂಗ್ರಹಿಸಿರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಲಾಗಿತ್ತು. ಆದರೂ ಈ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ.
Advertisement
ಮೃತ ವ್ಯಕ್ತಿಯನ್ನು ಹಾಸನದ ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.