– ಸಾಲಕ್ಕಾಗಿ ಇಡೀ ಕುಟುಂಬವೇ ಬಲಿ
ಹೈದರಾಬಾದ್: ಕೃಷಿಗಾಗಿ ಮಾಡಿದ ಸಾಲದ ಹೊರೆಯಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮದಲ್ಲಿ ನಡೆದಿದೆ.
Advertisement
ರೈತ ರಮೇಶ್(40) ಈತನ ಪತ್ನಿ ಹಾಗೂ ಮತ್ತು ಇಬ್ಬರು ಮಕ್ಕಳಾದ ಸೌಮ್ಯಾ(19) ಮತ್ತು ಅಕ್ಷಯ್(17) ನೇಣಿಗೆ ಶರಣಾಗಿದ್ದಾರೆ. ಸಾಲ ಬಾಧೆಗೆ ಸಿಲುಕಿದ ಒಂದು ಕುಟುಂಬದ ನಾಲ್ವರು ನೇಣು ಬೀಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ.
Advertisement
ನಾಲ್ವರು ನೇಣಿಗೆ ಶರಣಾಗುವ ಮುನ್ನ ಡೇತ್ ನೋಟ್ ಬರೆದಿಟ್ಟಿದ್ದಾರೆ. ನಿನ್ನೆ ನಮಗೆ ಸಾಲ ಕೊಟ್ಟವರಿಗೆ ವಾಪಸ್ ಸಾಲ ಕೊಡುತ್ತೇವೆ ಎಂದು ಮಾತುಕೊಟ್ಟಿದ್ದೆವು. ಆದರೆ ಕೊಟ್ಟ ಮಾತು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿಟ್ಟು ಸಾವನ್ನಪ್ಪಿದ್ದಾರೆ.
Advertisement
Advertisement
ರೈತ ರಮೇಶ್ ಅವರು ತಮ್ಮ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಾಲ ಮಾಡಿದ್ದಾರೆ. ಸಾಲ ತೀರಿಸಲು ಸಾಧ್ಯವಾಗಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ಮರಳಿ ಕೊಡುವುದಾಗಿ ಮಾತುಕೊಟ್ಟಿದ್ದರು. ಆದರೆ ಹಣವನ್ನು ವಾಪಸ್ ಕೊಡುವ ಪರಿಸ್ಥಿತಿಯಲ್ಲಿ ರಮೇಶ್ ಅವರ ಕುಟುಂಬ ಇರಲಿಲ್ಲ. ಹೀಗಾಗಿ ಕುಟುಂಬದ ನಾಲ್ವರು ಸದಸ್ಯರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬವೇ ಬಲಿಯಾಗಿದೆ.