ನವದೆಹಲಿ: ಜೂನ್ 21 ಭಾನುವಾರ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಚೀನಾ ಜೊತೆ ಸಂಘರ್ಷ ಜೊತೆ ಕೋವಿಡ್ 19 ಸೋಂಕಿತರ ಸಂಖ್ಯೆ ದೇಶದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಭಾಷಣ ಈಗ ಭಾರೀ ಮಹತ್ವ ಪಡೆದಿದೆ.
Advertisement
ಚೀನಾ ಜೊತೆಗಿನ ಸಂಘರ್ಷದ ಹಿನ್ನೆಲೆಯಲ್ಲಿ ಜೂನ್ 19 ರಂದು ಪ್ರಧಾನಿ ಮೋದಿ ಸರ್ವ ಪಕ್ಷ ಸಭೆಯನ್ನು ಕರೆದಿದ್ದಾರೆ. ಸಂಜೆ 5 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ರಾಜಕೀಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ. ಗಡಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಪ್ರತಿ ಪಕ್ಷಗಳು ಪ್ರಶ್ನೆಗಳನ್ನು ಕೇಳುತ್ತಿರುವ ಹಿನ್ನೆಲೆಯಲ್ಲಿ ಮೋದಿ ಸಭೆ ಕರೆದಿದ್ದಾರೆ.
Advertisement
Advertisement
ಚೀನಾ ಜೊತೆಗಿನ ಘರ್ಷಣೆ ಸಂಬಂಧ ಸರ್ಕಾರದ ಕಡೆಯಿಂದ ಮೊದಲ ಪ್ರತಿಕ್ರಿಯೆ ಎಂಬಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
Advertisement
The Nation will never forget their bravery and sacrifice. My heart goes out to the families of the fallen soldiers. The nation stand shoulder to shoulder with them in this difficult hour. We are proud of the bravery and courage of India’s breavehearts.
— Rajnath Singh (@rajnathsingh) June 17, 2020
ಹುತಾತ್ಮರಾದ ವೀರ ಸೈನಿಕರ ತ್ಯಾಗವನ್ನು ದೇಶ ಮರೆಯುವುದಿಲ್ಲ. ಮೃತಪಟ್ಟ ಸೈನಿಕರ ಕುಟಂಬದ ಸದಸ್ಯರಿಗೆ ನನ್ನ ಹೃದಯ ಮಿಡಿಯುತ್ತದೆ. ಗಲ್ವಾನ್ ಸೈನಿಕರು ಮೃತಪಟ್ಟ ವಿಚಾರ ನೋವಿನ ಸಂಗತಿ. ನಮ್ಮ ಸೈನಿಕರು ಧೈರ್ಯದಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಕಂಬನಿ ಮಿಡಿದಿದ್ದಾರೆ.