ತುಮಕೂರು: ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಡಿ.ಸಿ.ಗೌರಿ ಶಂಕರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಸ್ಪಷ್ಟಪಡಿಸಿದ್ದು, ನೆನ್ನೆ ಜ್ವರ ಇದ್ದ ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್-19 ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ನೆನ್ನೆ ಜ್ವರ ಇದ್ದ ಹಿನ್ನೆಲೆ #Covid_19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ
— DC GowriShankar (@dc_gowrishankar) September 15, 2020
Advertisement
ಶಾಸಕರಿಗೆ ಗುಣಲಕ್ಷಣಗಳು ಹೆಚ್ಚಿಲ್ಲದ ಕಾರಣ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರ ಸಲಹೆ ಪಡೆಯುತ್ತಿದ್ದಾರೆ. ಅಲ್ಲದೆ ತಮ್ಮ ಅಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.