ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ಕಾಂಗ್ರೆಸ್ ಅವರನ್ನು ಟೀಕಿಸಿ, ಶೀಘ್ರ ಗುಣಮುಖರಾಗುವಂತೆ ಶುಭ ಹಾರೈಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೊರೊನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್ವೈ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಈ ಹಿಂದೆ ಕೊರೋನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಇಂತಹ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ? ಎಂದು ಪ್ರಶ್ನಿಸಿ ಸಿಎಂ ಅವರಿಗೆ ಟ್ಯಾಗ್ ಮಾಡಿದೆ.
Advertisement
ಕೊರೋನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ @BSYBJP ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ.
ಈ ಹಿಂದೆ ಕೊರೋನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು.
ಇಂತರ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ?
— Karnataka Congress (@INCKarnataka) April 16, 2021
Advertisement
ಯಡಿಯೂರಪ್ಪನವರಿಗೆ ಸೋಮವಾರವೇ ಜ್ವರ ಕಾಣಿಸಿತ್ತು. ಆದರೆ ಮಾತ್ರೆ ತೆಗೆದುಕೊಂಡು ಉಪ ಚುನಾಚಣೆಯ ಪ್ರಚಾರಕ್ಕೆ ತೆರಳಿದ್ದರು.
Advertisement
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ. ಇಂದು ಬೆಳಗ್ಗೆ ತುರ್ತು ಸಭೆಯ ಬಳಿಕ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಟೆಸ್ಟ್ ಮಾಡಿಸಿದ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಕೂಡಲೇ ಸಿಎಂ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ
— B.S.Yediyurappa (@BSYBJP) April 16, 2021
ಮೂರು ದಿನಗಳ ಹಿಂದೆಯಷ್ಟೇ ಬೆಳಗಾವಿ ಚುನಾವಣಾ ಪ್ರಚಾರದ ಬ್ಯುಸಿಯಾಗಿದ್ದ ಸಿಎಂ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ತಕ್ಷಣ ವೈದ್ಯರು ಸಿಎಂ ಉಳಿದುಕೊಂಡಿದ್ದ ಹೋಟೆಲ್ ಗೆ ತೆರಳಿ ವೈದ್ಯಕೀಯ ತಪಾಸಣೆ ನಡೆಸಿದ್ದರು. ಆ ಬಳಿಕವೂ ಸಿಎಂ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ನಂತರ ಬೆಂಗಳೂರಿಗೆ ಮರಳಿದ್ದರು. ಅಲ್ಲದೆ ಇಂದು ತುರ್ತು ಸಭೆ ಕರೆದಿದ್ದರು.
ಮುಖ್ಯಮಂತ್ರಿ @BSYBJP ಅವರಿಗೆ ಕೊರೊನಾ ಸೋಂಕು ತಗುಲಿರುವ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಶೀಘ್ರ ಅವರು ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
— Siddaramaiah (@siddaramaiah) April 16, 2021
ಈ ಹಿಂದೆ ಸಿಎಂ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡು ಗುಣಮುಖರಾಗಿದ್ದರು. ಈ ಹಿನ್ನೆಲೆಯಲ್ಲಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾದಾಗ ಮತ್ತೆ ಟೆಸ್ಟ್ ಮಾಡಿಸಿದ್ದು, ಅದರಲ್ಲಿ ನೆಗೆಟಿವ್ ಬಂದಿತ್ತು. ಇದೀಗ ಮತ್ತೆ ಇಂದು ಆರೋಗ್ಯ ಕೈಕೊಟ್ಟ ಹಿನ್ನೆಲೆಯಲ್ಲಿ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ.