ಲಕ್ನೋ: ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದ ವೇಳೆ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯ ವಾರಾಣಸಿ-ಜಾನ್ಪುರ ಹೆದ್ದಾರಿಯಲ್ಲಿ ನಡೆದಿದೆ.
Advertisement
ಮೃತರನ್ನು ಅಮರ್ ಬಹದ್ದೂರ್ ಯಾದವ್(58), ರಾಮ್ ಸಿಂಗಾರ್ ಯಾದವ್ (38), ಮುನ್ನಿಲಾಲ್(38), ಇಂದ್ರಜಿತ್ ಯಾದವ್(48), ಕಮಲಾ ಪ್ರಸಾದ್ ಯಾದವ್(60) ಹಾಗೂ ರಾಮ್ ಕುಮಾರ್(65) ಎಂದು ಗುರುತಿಸಲಾಗಿದೆ. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
Advertisement
Advertisement
ವಾರಣಾಸಿಯಲ್ಲಿ ನಡೆದ ಅಂತ್ಯಕ್ರಿಯೆಯನ್ನು ಮುಗಿಸಿ 17 ಮಂದಿ ಜೀಪಿನಲ್ಲಿ ವಾಪಾಸಾಗುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಟ್ರಕ್ ಮತ್ತು ಜೀಪ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತದ ಪರಿಣಾಮವಾಗಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿದ್ದಾರೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಕುಮಾರ್ ಹೇಳಿದ್ದಾರೆ.
Advertisement