ಹಾಸನ: ಒಮ್ಮೆಲೆ ಟ್ರ್ಯಾಕ್ಟರ್ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಏರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
Advertisement
ಜಿಲ್ಲೆಯ ಶಾಂತಿಗ್ರಾಮ ಬಳಿ ಬೆಂಗಳೂರು-ಹಾಸನ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು, ಕೆಎಸ್ಆರ್ ಟಿಸಿ ಬಸ್ಗೆ ಇದ್ದಕ್ಕಿದ್ದಂತೆ ಟ್ರ್ಯಾಕ್ಟರ್ ಅಡ್ಡ ಬಂದ ಹಿನ್ನೆಲೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈವರ್ ಮೇಲೆ ಹತ್ತಿದೆ. ಬಸ್ ಡಿವೈಡರ್ ದಾಟಿ ಹೋಗದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Advertisement
Advertisement
ಡ್ರೈವರ್ ಹಾಗೂ ಕಂಡಕ್ಟರ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿತ್ತು. ವಾಹನಗಳು ಸಾಲುಗಟ್ಟಿ ನಿಂತಿದ್ದವು. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನಿಡಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಂಚಾರವನ್ನು ಸುಗಮಗೊಳಿಸಿದ್ದಾರೆ.