ಬೆಂಗಳೂರು: ನಾಳೆ ಮುಖ್ಯಮಂತ್ರಿಗಳಿಗೆ ಸಲ್ಲಿಕೆಯಾಗಲಿದೆ ಎನ್ನಲಾಗುತ್ತಿರುವ ಡಾ.ದೇವಿಶೆಟ್ಟಿ ಅವರ ವರದಿಯು ತಮ್ಮ ಕೈಸೇರಿದ ಬಳಿಕ ಅದನ್ನು ಕೂಲಂಕಶವಾಗಿ ಪರಿಶೀಲಿಸಿ, ಶಾಲಾ ಚಟುವಟಿಕೆಗಳ ಕುರಿತಂತೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದೆಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ತರಗತಿ ಕಲಿಕೆಯ ಬಗ್ಗೆ ವರದಿಯಲ್ಲಿ ಉಲ್ಲೇಖವಿದೆ ಎಂದು ಮಾಧ್ಯಮಗಳಲ್ಲಿಯಷ್ಟೇ ನೋಡಿದ್ದೇನೆ. ವರದಿ ತಮ್ಮ ಕೈಸೇರಿದ ಬಳಿಕವಷ್ಟೇ ಪ್ರತಿಕ್ರಿಯಿಸಲು ಸಾಧ್ಯ ಎಂದರು.
Advertisement
Advertisement
ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30ರಷ್ಟು ಮಕ್ಕಳು ಕಲಿಕೆಯಿಂದ ಹೊರಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ. ಈ ಅಧ್ಯಯನ ವರದಿಯ ಬೆಳಕಿನಲ್ಲಿ ನಾವು ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹೆಚ್ಚಿನ ರೀತಿಯ ಗಮನಹರಿಸುವ ಸವಾಲು ನಮ್ಮ ಮುಂದಿದೆ. ಇದನ್ನೂ ಓದಿ: ನಾನು ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ: ಡಿಕೆಶಿ
Advertisement
Advertisement
ಸರ್ಕಾರಕ್ಕೆ ಶಾಲೆಗಳನ್ನು ತೆರೆಯಬೇಕೆಂಬ ಉತ್ಸುಕತೆ, ತರಗತಿ ಕಲಿಕೆ ಮುಖ್ಯವೆನ್ನುವುದು ಸಾಮಾನ್ಯ ಅಭಿಪ್ರಾಯವಾಗಿದ್ದರೂ ಹಲವಾರು ಅಂಶಗಳನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ ಡಾ.ದೇವಿಶೆಟ್ಟಿ ಅವರು ಸಲ್ಲಿಸಲಿರುವ ವರದಿಯನ್ನು ಪರಿಪೂರ್ಣವಾಗಿ ಗಮನಿಸಿ ಕ್ಲಪ್ತ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು. ಇದನ್ನೂ ಓದಿ: ತಾತ ಆಗಲಿದ್ದಾರೆ ಎಚ್ಡಿಕೆ – ಸಂಭ್ರಮದಲ್ಲಿ ಗೌಡರ ಕುಟುಂಬ