ಬೆಂಗಳೂರು: ಮದ್ದೂರಿನಲ್ಲಿ ಕಾರ್ಯಕರ್ತನಿಗೆ ಡಿಕೆ ಶಿವಕುಮಾರ್ ಅವರು ಕಪಾಳಮೋಕ್ಷ ಮಾಡಿದ ವಿಚಾರವಾಗಿ, ರೌಡಿ ಡಿಕೆಶಿ ಹ್ಯಾಷ್ ಟ್ಯಾಗ್ ನಲ್ಲಿ ಬಿಜೆಪಿ ಸರಣಿ ಟ್ವೀಟ್ ಮಾಡುವ ಮೂಲಕ ಟ್ವಿಟ್ಟರ್ ವಾರ್ ಆರಂಭಿಸಿದೆ.
Advertisement
ಕೆ.ಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಂಸದ ಜಿ. ಮಾದೇಗೌಡ ಅವರ ಆರೋಗ್ಯ ವಿಚಾರಿಸಲು ಡಿಕೆಶಿ ಬಂದಿದ್ದರು. ಈ ವೇಳೆ ಆಸ್ಪತ್ರೆಯ ಒಳಗಡೆಗೆ ಬರುವ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಡಿಕೆಶಿ ಹೆಗಲ ಮೇಲೆ ಕೈ ಹಾಕಲು ಪ್ರಯತ್ನಿಸಿದರು. ಕೂಡಲೇ ಕಾರ್ಯಕರ್ತನ ತಲೆಯ ಮೇಲೆ ಪಟಾರ್ ಎಂದು ಡಿಕೆ ಶಿವಕುಮಾರ್ ಹೊಡೆದಿದ್ದರು. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ, ಡಿಕೆಶಿ ವಿರುದ್ಧ ಟೀಕೆ ಆರಂಭಿಸಿದೆ. ಇದೀಗ ಟ್ವೀಟ್ ಗುದ್ದು ಕೊಡಲು ಮುಂದಾಗಿದೆ. ಇದನ್ನೂ ಓದಿ: ಕಾಮನ್ ಸೆನ್ಸ್ ಇಲ್ಲವಾ? – ಬೆಂಬಲಿಗನ ತಲೆಗೆ ಡಿಕೆಶಿ ಏಟು
Advertisement
Advertisement
ಟ್ವೀಟ್ನಲ್ಲಿ ಏನಿದೆ?
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ. ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿಕೆಶಿ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ? ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆಮಾಡುವುದು ಡಿಕೆಶಿ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!?
Advertisement
ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು @DKShivakumar ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ.
ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು.
ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!?#ರೌಡಿಡಿಕೆಶಿ pic.twitter.com/XsIKwLLqol
— BJP Karnataka (@BJP4Karnataka) July 10, 2021
ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೊದಲು ಅರಿತುಕೊಳ್ಳಬೇಕು. ಈ ಹಿಂದೆ ವಿದ್ಯಾರ್ಥಿಯೊಬ್ಬ ಸೆಲ್ಫಿ ತೆಗೆದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆ ನಡೆಸಿದ್ದರು. #ಮಹಾನಾಯಕ ಡಿಕೆಶಿಯವರೇ ಭೂಗತ ಜಗತ್ತಿನ ರೀತಿಯ ವರ್ತನೆಗಳು ನಿಮಗೆ ಅನಿವಾರ್ಯ ಎಂದಾದರೆ ಸಾರ್ವಜನಿಕ ಜೀವನ ಬಿಟ್ಟುಬಿಡಿ ಎಂದು ರೌಡಿ ಡಿಕೆಶಿ ಹ್ಯಾಷ್ ಟ್ಯಾಗ್ ಮೂಲಕ ಡಿಕೆಶಿಗೆ ಬಿಜೆಪಿ ಟಾಂಗ್ ನೀಡಿದೆ.