ಬೆಂಗಳೂರು: ಇಂದು ಬೆಳಗ್ಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಇದೀಗ ಡಿಕೆಶಿ ಮನೆಯಲ್ಲಿ ಬರೋಬ್ಬರಿ 50 ಲಕ್ಷ ಹಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಡಿಕೆಶಿಗೆ ಮೊದಲ ಅಗ್ನಿ ಪರೀಕ್ಷೆಯಲ್ಲಿ ಬಿಗ್ ಶಾಕ್ ಕೊಟ್ಟ ಸಿಬಿಐ
ರಾಜ್ಯ ಸರ್ಕಾರದ ಅನುಮತಿ ಪಡೆದ ನಂತರ ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಮನೆಯ ಮೇಲೆ ದಾಳಿ ಮಾಡಿದ್ದಾರೆ. ರೇಡ್ ವೇಳೆ ಡಿಕೆಶಿಯ ನಿವಾಸದಲ್ಲಿ 50 ಲಕ್ಷ ಹಣ ಪತ್ತೆಯಾಗಿದ್ದು, ಸಿಬಿಐ ಅಧಿಕಾರಿಗಳು ಆ ಹಣವನ್ನು ಸೀಜ್ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಹಣದ ಬಗ್ಗೆ ವಿಚಾರಣೆ ಮಾಡುವ ಸಲುವಾಗಿ ಸಿಬಿಐ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ಮೋದಿ ಸರ್ಕಾರ ನಡೆಸಿರೋ ದಾಳಿ – ಡಿಕೆಶಿ ಮನೆ ಮೇಲಿನ CBI ರೇಡ್ಗೆ ಸಿದ್ದು ಖಂಡನೆ
Advertisement
ಸಿಬಿಐ ಅಧಿಕಾರಿಗಳು ಡಿಕೆಶಿಯನ್ನು ವಶಕ್ಕೆ ಪಡೆದು ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ಮಾಡುವ ಸಾಧ್ಯತೆ ಇದೆ. ಡಿಕೆಶಿ ಮನೆ ಮೇಲೆ ಮಾತ್ರವಲ್ಲದೇ ಸೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ದಾಳಿ ಮಾಡಿದೆ. ಡಿಕೆಶಿ, ಡಿ.ಕೆ.ಸುರೇಶ್ ಅವರಿಗೆ ಸಂಬಂಧಿಸಿದ ನಿವಾಸ, ಸಂಸ್ಥೆ, ಕಟ್ಟಡಗಳ ಮೇಲೆ ಸಿಬಿಐ ದಾಳಿ ಮಾಡಿದೆ. ಒಟ್ಟು 14 ವಿವಿಧ ಸ್ಥಳಗಳ ಮೇಲೆ ದಾಳಿ ಸಿಬಿಐ ತಂಡ ದಾಳಿ ಮಾಡಿದೆ.
Advertisement
Advertisement
ಇಂದು ಬೆಳ್ಳಂಬೆಳಗ್ಗೆ ಡಿಕೆಶಿ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಇದೀಗ ಬೆಂಗಳೂರಿನ ಸಿಸಿಬಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷನ ವಿರುದ್ಧ ಎಫ್ಆರ್ ದಾಖಲಿಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಆರೋಪದ ಮೇಲೆ ಈ ಎಫ್ಐಆರ್ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.