– ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಕ್ಕೆ ಮುಖಂಡನ ಪುತ್ರರು ಅರೆಸ್ಟ್
ಕೋಲ್ಕತ್ತಾ: ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಮತ್ತು ಇಬ್ಬರು ಪುತ್ರರನ್ನು ಪಶ್ಚಿಮ ಬಂಗಾಳ ಪೊಲೀಸರು ಮಂಗಳವಾರ ರಾತ್ರಿ ಪುರ್ಬಾ ಬರ್ಧಮಾನ್ ಜಿಲ್ಲೆಯ ಗಲ್ಸಿಯಲ್ಲಿ ಬಂಧಿಸಿದ್ದಾರೆ.
Advertisement
ಇತ್ತೀಚೆಗೆ ಕೊಕೇನ್ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಪಮೇಲಾ ಗೋಸ್ವಾಮಿ ವಿಚಾರಣೆ ವೇಳೆ ರಾಕೇಶ್ ಸಿಂಗ್ ಹೆಸರು ಬಹಿರಂಗಪಡಿಸಿದ್ದರು. ಈ ವಿಚಾರವಾಗಿ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ನನ್ನು ಬಂಧಿಸಲಾಗಿದೆ.
Advertisement
Advertisement
ಬಂದರು ಪ್ರದೇಶದಲ್ಲಿರುವ ಬಿಜೆಪಿ ರಾಜ್ಯ ಸಮಿತಿ ಮುಖಂಡನ ಮನೆ ಪ್ರವೇಶಿಸದಂತೆ ಸಿಬ್ಬಂದಿಯನ್ನು ರಾಕೇಶ್ ಸಿಂಗ್ ಪುತ್ರರು ತಡೆದಿದ್ದರು. ಮನೆ ಶೋಧಕಾರ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಇಬ್ಬರು ಪುತ್ರರನ್ನು ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
Advertisement
ರಾಕೇಶ್ ಸಿಂಗ್ಗಾಗಿ ಹುಡುಕಾಟ ಮಾಡುತ್ತಿದ್ದೇವು. ಆದರೆ ಸಿಂಗ್ ವಾಹನವನ್ನು ಬದಲಿಸಿ ಪ್ರಯಾಣ ಮಾಡುತ್ತಿದ್ದಾರೆ ಎನ್ನುವ ಸುಳಿವು ಸಿಕ್ಕಿತ್ತು. ಕೋಲ್ಕತ್ತಾ ಪೊಲೀಸರು ನೀಡಿದ ಮಾಹಿತಿಗೆ ಅನುಸಾರವಾಗಿ ಗಲ್ಸಿ ರಾಷ್ಟ್ರೀಯ ಹೆದ್ದಾರಿ ಟೋಲ್ ನಾಕಾದಲ್ಲಿ ರಾಕೇಶ್ ಸಿಂಗ್ನನ್ನು ಬಂಧಿಸಲಾಗಿದೆ. ಸಿಂಗ್ಗೆ ಭದ್ರತೆ ನೀಡಿದ್ದ ಸಿಐಎಸ್ಎಫ್ ಸಿಬ್ಬಂದಿಯ ಜತೆ ಕಾರಿನಲ್ಲಿ ಆರೋಪಿ ಅಜ್ಞಾತ ಸ್ಥಳಕ್ಕೆ ಹೋಗುತ್ತಿದ್ದರು ಎನ್ನಲಾಗುತ್ತಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆ ತೋರುತ್ತಿತ್ತು ಎಂದು ಉನ್ನತ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಬಿಜೆಪಿ ಮುಖಂಡ ಗೋಸ್ವಾಮಿ, ಸ್ನೇಹಿತ ಪ್ರಬೀರ್ ಕುಮಾರ್ ಡೇ ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ 90 ಗ್ರಾಂ ಕೊಕೇನ್ ಪತ್ತೆಯಾಗಿದೆ ಎಂದು ಆರೋಪಿಸಿದ ನಂತರ ಈ ಪ್ರಕರಣದಲ್ಲಿ ಸಿಂಗ್ ಹೆಸರು ಕೇಳಿಬಂದಿತ್ತು. ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಷಡ್ಯಂತ್ರ ರೂಪಿಸಲಾಗಿದೆ, ಇದೆಲ್ಲಾ ಸಿಂಗ್ ಕೈವಾಡವೆಂದು ಗೋಸ್ವಾಮಿ ಹೇಳಿದ್ದರು. ಇದಾದ ನಂತರ ಪೊಲೀಸರು ಬದ್ರ್ವಾನ್ ನಲ್ಲಿ ರಾಕೇಶ್ ಸಿಂಗ್ ಅವರನ್ನು ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ತಮ್ಮ ಪಾತ್ರವಿದೆ ಎನ್ನುವ ಬಗ್ಗೆ ವಿಚಾರಣೆಗೆ ಪೊಲೀಸರು ನೋಟೀಸ್ ನೀಡಿದ್ದನ್ನು ಪ್ರಶ್ನಿಸಿ ರಾಕೇಶ್ ಸಿಂಗ್ ಕೋಲ್ಕತ್ತಾ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು ಆ ಅರ್ಜಿ ವಜಾ ಆಗಿತ್ತು. ಸಿಂಗ್ ಪರ ವಕೀಲರು ತಮ್ಮ ಕಕ್ಷಿದಾರರು ಬಿಜೆಪಿ ಸೇರಿದ ಮೇಲೆ ಅವರ ವಿರುದ್ಧ 26 ಪ್ರಕರಣಗಳು ದಾಖಲಾಗಿದೆ, ಇದೊಂದು ರಾಜಕೀಯ ಷಡ್ಯಂತ್ರ ಎಂದು ಹೇಳಿದ್ದಾರೆ.