LatestMain PostNational

ತರಬೇತಿ ವೇಳೆ ಸಮುದ್ರಕ್ಕಪ್ಪಳಿಸಿದ ಯುದ್ಧ ವಿಮಾನ – ಪೈಲಟ್ ಕಣ್ಮರೆ

ನವದೆಹಲಿ: ಭಾರತೀಯ ನೌಕಾಪಡೆಯ ಮಿಗ್-29ಕೆ ತರಬೇತುದಾರ ವಿಮಾನವು ಅರಬ್ಬಿ ಸಮುದ್ರದಲ್ಲಿ ಗುರುವಾರ ಅಪಘಾತಕ್ಕೀಡಾಗಿದ್ದು, ಓರ್ವ ಪೈಲಟ್ ಕಾಣೆಯಾಗಿದ್ದಾರೆ.

ಭಾರತೀಯ ನೌಕಾಪಡೆಯ ಮಾಹಿತಿ ಪ್ರಕಾರ, ಅರಬ್ಬಿ ಸಮುದ್ರದಲ್ಲಿ ಐಎನ್‍ಎಸ್ ವಿಕ್ರಮಾದಿತ್ಯ ನೌಕೆಯಿಂದ ಕಾರ್ಯನಿರ್ವಹಿಸುತ್ತಿರುವ ಮಿಗ್-29ಕೆ ತರಬೇತುದಾರ ವಿಮಾನವು ನವೆಂಬರ್ 26ರಂದು ಸಂಜೆ 5 ಗಂಟೆಗೆ ಅಪಘಾತಕ್ಕೀಡಾಗಿದೆ. ಈ ಯುದ್ಧವಿಮಾನದಲ್ಲಿದ್ದ ಇಬ್ಬರು ಪೈಲಟ್‍ಗಳ ಪೈಕಿ ಒಬ್ಬರು ಸಿಕ್ಕಿದ್ದು, ಇನ್ನೊಬ್ಬರು ಸಮುದ್ರದಲ್ಲಿ ಕಣ್ಮರೆಯಾಗಿದ್ದಾರೆ ಎಂದು ತಿಳಿಸಿದೆ.

ಈ ಅಪಘಾತದ ಹಿಂದಿನ ಕಾರಣವನ್ನು ಕಂಡುಹಿಡಿಯಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆಗೆ ಆದೇಶ ಮಾಡಿದ್ದಾರೆ. ಕಳೆದ ವರ್ಷ ನವೆಂಬರಿನಲ್ಲಿ ಪಕ್ಷಿಯೊಂದು ವಿಮಾನಕ್ಕೆ ಬಡಿದ ಕಾರಣ ಗೋವಾದಲ್ಲಿ ನೌಕಾಪಡೆಯ ಮಿಗ್-29ಕೆ ಯುದ್ಧವಿಮಾನ ಸಮುದ್ರಕ್ಕೆ ಅಪ್ಪಳಿಸಿತ್ತು. ಭಾರತೀಯ ನೌಕಪಡೆಯು 40 ಮಿಗ್-29ಕೆ ಯುದ್ಧ ವಿಮಾನಗಳನ್ನು ಹೊಂದಿದ್ದು, ಅವು ಗೋವಾ ಮತ್ತು ಅರಬ್ಬಿ ಸಮುದ್ರದಲ್ಲಿ ಐಎನ್‍ಎಸ್ ವಿಕ್ರಮಾದಿತ್ಯ ನೌಕೆಯ ಜೊತೆ ಕಾರ್ಯನಿರ್ವಹಿಸುತ್ತವೆ.

Leave a Reply

Your email address will not be published. Required fields are marked *

Back to top button