ಮಂಗಳೂರು: ಜಿಲ್ಲೆಯಲ್ಲಿ ಇಂದು ಕೊರೊನಾಗೆ ಮತ್ತೊಂದು ಬಲಿಯಾಗಿದ್ದು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವು 18ಕ್ಕೇರಿದೆ. ಇತ್ತ 7 ದಿನಗಳ ಮಗುವಿಗೂ ಕೊರೊನಾ ಮಹಾಮಾರಿ ಅಂಟಿಕೊಂಡಿದೆ.
ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿ 49 ವರ್ಷದ ವ್ಯಕ್ತಿಗೆ ನಿನ್ನೆ ಕೊರೊನಾ ಪಾಸಿಟಿವ್ ಆಗಿದ್ದು, ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಳೆದ 20 ದಿನಗಳಿಂದ ಮನೆಯಲ್ಲೇ ಅನಾರೋಗ್ಯದಿಂದ ಬಳಲುತ್ತಿದ್ದು, ಅಸ್ತಮಾ, ಕಿಡ್ನಿ ಹಾಗೂ ಲಿವರ್ ಸಮಸ್ಯೆಯ ಚಿಕಿತ್ಸೆಗಾಗಿ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಅವರ ಗಂಟಲಿನ ದ್ರವ ಪರೀಕ್ಷೆಗೆ ಕಳುಹಿಸಲಾಗಿದ್ದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಇಂದು ಮುಂಜಾನೆ ಮೃತಪಟ್ಟಿದ್ದಾರೆ.
Advertisement
Advertisement
ಕೊರೊನಾ ಮಹಾಮಾರಿ ಇದೀಗ 7 ದಿನದ ಮಗುವನ್ನೂ ಬಿಡದೆ ಕಾಡುತ್ತಿದೆ. ಮಂಗಳೂರಿನಲ್ಲಿ ಜನಿಸಿದ 7 ದಿನದ ಮಗುವಿಗೆ ಕೊರೊನಾ ಪಾಸಿಟಿವ್ ಆಗಿದ್ದು ಎಲ್ಲರಲ್ಲೂ ಆತಂಕ ಹೆಚ್ಚಾಗಿಸಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದ 21 ವರ್ಷದ ಮಹಿಳೆಗೆ ಕಳೆದ ಜೂನ್ 28 ರಂದು ಕೊರೊನಾ ಪಾಸಿಟಿವ್ ಆಗಿತ್ತು.
Advertisement
Advertisement
ಹೀಗಾಗಿ ಅಂದೇ ಮಗುವಿನ ಗಂಟಲ ದಿನ ದ್ರವ ಪರೀಕ್ಷೆಗೆ ಕಳುಹಿಸಲಾಗಿದ್ದು, ಇದೀಗ 7 ದಿನದ ಮಗುವಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಮಗು ಹಾಗೂ ತಾಯಿ ಸರ್ಕಾರಿ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.