ನವದೆಹಲಿ/ ಬೆಂಗಳೂರು: ದೆಹಲಿ ಗಡಿಗಳಲ್ಲಿ ಹೈಡ್ರಾಮಾ ಮುಂದುವರಿದಿದೆ. ಮೊನ್ನೆ ಘಾಜಿಪುರ ಗಡಿಯಲ್ಲಿ ಕರೆಂಟ್, ನೀರು ಕಡಿತಗೊಳಿಸಿದ್ದ ಸರ್ಕಾರ ಈಗ ರೈತರು ಪ್ರತಿಭಟನೆ ನಡೆಸುತ್ತಿರುವ ಎಲ್ಲ ಗಡಿಗಳಲ್ಲಿ ಇಂಟರ್ನೆಟ್ ಸೇವೆಯನ್ನು ಇದ್ದಕ್ಕಿದ್ದಂತೆ ಬಂದ್ ಮಾಡಿದೆ.
ಸಿಂಘು, ಟಿಕ್ರಿ, ಗಾಜಿಪುರ್ ಗಡಿಯಲ್ಲಿ ಜ.31ರ ರಾತ್ರಿ 11 ಗಂಟೆಯವರೆಗೆ ತಾತ್ಕಾಲಿಕವಾಗಿ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ನಡೆಯುತ್ತಿರುವ ರೈತರ ಪ್ರತಿಭಟನೆಯ ಮಧ್ಯೆ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ.
Advertisement
Advertisement
ವಿಚಾರಣೆಗೆ ಹಾಜರಾಗುವಂತೆ ಟಿಕಾಯತ್ ಸೇರಿ 9 ರೈತ ಮುಖಂಡರಿಗೆ ಎಸ್ಐಟಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ. ಈ ಮಧ್ಯೆ, ಇಂದು ನಡೆದ ಸರ್ವ ಪಕ್ಷ ಸಭೆಯಲ್ಲಿ ಮಾತನಾಡಿದ ಪ್ರಧಾನಿ, ಫೋನ್ನಲ್ಲಿ ರೈತರ ಜೊತೆ ಮಾತುಕತೆಗೂ ಈಗಲೂ ಸಿದ್ಧ. ಕೂಡಲೇ ಹೋರಾಟ ಕೈಬಿಡಿ ಎಂದು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
Advertisement
ಬೆಂಗಳೂರಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರೈತ ಚಳವಳಿ ಹತ್ತಿಕ್ಕಲು ಬಿಜೆಪಿ ನೋಡುತ್ತಿದೆ. ಇದು ನಾಚಿಕೆಗೇಡಿನ ಕೆಲಸ. ಮೋದಿ ತಂದ ಮನೆಹಾಳು ಕಾನೂನುಗಳನ್ನು ಒಪ್ಪಿಕೊಳ್ಳಬೇಕೇ ಎಂದು ಪ್ರಶ್ನಿಸಿ ಕಿಡಿಕಾರಿದ್ದಾರೆ.
Advertisement
ರೈತರ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕೃಷಿ ಮಾರುಕಟ್ಟೆಗೆ ಕಾಲಿಟ್ಟರೆ ಮೋದಿ ಸರ್ಕಾರದ ಕಾಲು ಮುರಿಯುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಗುಡುಗಿದ್ದಾರೆ.