ಬೆಂಗಳೂರು: ನಾನು ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದು, ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಅಂತ ಅರವಿಂದ ಬೆಲ್ಲದ್ ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿ ಹರಡಿಸಲಾಗುತ್ತಿದೆ. ಮಾಧ್ಯಮಗಳಲ್ಲಿ ನನ್ನ ದೆಹಲಿ ಭೇಟಿಯ ಕುರಿತು ಬರುತ್ತಿರುವ ಸುದ್ದಿಗಳು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ನನ್ನ ದೆಹಲಿ ಭೇಟಿಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುವುದು ಬೇಡ ಎಂದು ಮನವಿ ಮಾಡಿಕೊಳ್ಳುತ್ತೇನೆ ಅಂತ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿ ದಿಢೀರ್ ಬೆಳವಣಿಗೆ – ಮತ್ತೆ ದೆಹಲಿಗೆ ತೆರಳಿದ ಶಾಸಕ ಬೆಲ್ಲದ್
Advertisement
ಶುಕ್ರವಾರ ತಡರಾತ್ರಿಯೇ ಶಾಸಕ ಅರವಿಂದ್ ಬೆಲ್ಲದ್ ಅವರು ರಾಷ್ಟ್ರ ರಾಜಧಾನಿಗೆ ಪಯಣ ಬೆಳೆಸಿದ್ದು, ದೆಹಲಿಯ ಖಾಸಗಿ ಹೋಟೆಲ್ನಲ್ಲಿ ತಂಗಿದ್ದಾರೆ. ಆದರೆ ‘ನಾನೇ ಸಿಎಂ’ ಎಂಬ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹೇಳಿಕೆ ಬೆನ್ನಲ್ಲೇ ಬೆಲ್ಲದ್ ದೆಹಲಿಗೆ ತೆರಳಿರುವುದು ಭಾರೀ ಕುತೂಹಲ ಮೂಡಿಸಿತ್ತು.
Advertisement
ಕಳೆದ ಮೇ 24 ರಂದು ಸಚಿವ ಸಿ.ಪಿ ಯೋಗೇಶ್ವರ್ ಜೊತೆ ಬೆಲ್ಲದ್ ಹೋಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ವರಿಷ್ಠರ ಭೇಟಿ ಸಾಧ್ಯವಾಗಿರಲಿಲ್ಲ. ಈಗ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ಬೆನ್ನಲ್ಲೇ ದೆಹಲಿಗೆ ಬೆಲ್ಲದ್ ದೌಡಾಯಿಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.