– ವೀಡಿಯೋ ವೈರಲ್
ಪಾಟ್ನಾ: ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯ ಮೇಲೆ ಅರ್ಚಕ ಹಲ್ಲೆ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಿಹಾರದ ದರ್ಬಾಂಗ್ ನಗರದ ಶ್ಯಾಮಾ ಮಂದಿರದಲ್ಲಿ ಈ ಘಟನೆ ನಡೆದಿದ್ದು, ವೀಡಿಯೋ ವೈರಲ್ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ಶ್ಯಾಮಾ ತಾಯಿ ದರ್ಶನಕ್ಕೆ ಮಹಿಳೆ ಆಗಮಿಸಿದ್ದರು. ಮಹಿಳೆ ದೇಗುಲದೊಳಗೆ ತೆರಳಿ ಪೂಜೆ ಸಲ್ಲಿಸಲು ಮುಂದಾಗಿದ್ದಕ್ಕೆ ಅರ್ಚಕ ಈ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಕೋವಿಡ್-19 ಮಾರ್ಗಸೂಚಿ ಅನ್ವಯ ದ್ವಾರದಲ್ಲಿಯೇ ನಿಂತು ದರ್ಶನ ಪಡೆದು ಹಿಂದಿರುಗಬೇಕು. ಆದ್ರೆ ಮಹಿಳೆ ದೇಗುಲ ಪ್ರವೇಶಕ್ಕೆ ಮುಂದಾಗಿದ್ದರು ಎಂದು ವರದಿಯಾಗಿದೆ.
Advertisement
Advertisement
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ದೇವಸ್ಥಾನ ಆಡಳಿತ ಮಂಡಳಿ ಮುಖ್ಯಸ್ಥ ಚೌಧರಿ ಹೇಮಚಂದ್ರ ರಾಯ್, ವೀಡಿಯೋ ನಮ್ಮ ಗಮನಕ್ಕೂ ಬಂದಿದ್ದು, ಅರ್ಚಕರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಅರ್ಚಕರಿಗೆ ಸ್ಪಷ್ಟನೆ ನೀಡುವಂತೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ. ಇತ್ತ ಪ್ರಕರಣ ದಾಖಲಿಸಿಕೊಂಡಿರುವ ಅರ್ಚಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಆದ್ರೆ ಮಹಿಳೆ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ನಾನು ಹಠವಾದಿ, ಅಂದುಕೊಂಡಿದ್ದನ್ನ ಸಾಧಿಸದೇ ಬಿಡಲ್ಲ: ಸಚಿವ ಆನಂದ್ ಸಿಂಗ್
Advertisement
Advertisement