– 20.27 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ನವದೆಹಲಿ: ದೇಶದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಒಟ್ಟು ಸೋಂಕಿತರ ಸಂಖ್ಯೆ 20.27 ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 62,538 ಮಂದಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
India’s #COVID19 case tally crosses 20-lakh mark with highest single-day spike of 62,538 cases
The COVID19 tally rises to 20,27,075 including 6,07,384 active cases, 13,78,106 cured/discharged/migrated & 41,585 deaths: Ministry of Health pic.twitter.com/AaPCaQW27M
— ANI (@ANI) August 7, 2020
Advertisement
886 ಮಂದಿ ಕಳೆದ 24 ಗಂಟೆಯಲ್ಲಿ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 41,585ಕ್ಕೇರಿದೆ. 6,07,384 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆ.6ರಂದು 5,74,783 ಮಂದಿಯ ಮಾದರಿಯನ್ನು ಪರೀಕ್ಷೆ ಮಾಡಲಾಗಿದೆ. ಇದುವರೆಗೂ 2,27,24,134 ಮಂದಿಯ ಸ್ಯಾಂಪೆಲ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
Advertisement
ದೇಶದಲ್ಲಿ ಇದುವರೆಗೂ 13.60 ಲಕ್ಷ ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ರಿಕವರಿ ದರ ಶೇ.67 ರಷ್ಟಿದೆ. ಕಳೆದ ಒಂದು ತಿಂಗಳಲ್ಲಿ ಕೊರೊನಾಗೆ 20 ಸಾವಿರಕ್ಕೂ ಹೆಚ್ಚು ಮಂದಿ ಬಲಿ ಆಗಿದ್ದಾರೆ. ಜಗತ್ತಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1.90 ಕೋಟಿ ದಾಟಿದೆ. 7.12 ಲಕ್ಷ ಮಂದಿ ಬಲಿ ಆಗಿದ್ದಾರೆ.
Advertisement
The total number of #COVID19 samples tested up to 6th August is 2,27,24,134 including 5,74,783 samples tested yesterday: Indian Council of Medical Research (ICMR) pic.twitter.com/uyfL3IjWaM
— ANI (@ANI) August 7, 2020