– ಈವರೆಗೆ 27,969 ಸೋಂಕಿತರು ಗುಣಮುಖ
ನವದೆಹಲಿ: ದಿನ ಕಳೆದಂತೆ ಭಾರತದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ಸೋಂಕಿತರ ಸಂಖ್ಯೆ 81,997ಕ್ಕೆ ಏರಿದ್ದು, 2,649 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಈವರೆಗೆ 27,969 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಮಂದಿ ಕೊರೊನಾಗೆ ತುತ್ತಾಗಿದ್ದಾರೆ. ಕಿಲ್ಲರ್ ಕೊರೊನಾ ಈವರೆಗೆ ಮಹಾರಾಷ್ಟ್ರದಲ್ಲಿ 1,019 ಮಂದಿಯನ್ನು ಬಲಿಪಡೆದಿದ್ದು, ಒಟ್ಟು 27,524 ಮಂದಿಗೆ ಈವರೆಗೆ ಸೋಂಕು ತಗುಲಿದೆ. ಸುಮಾರು 6,059 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
Advertisement
Advertisement
ತಮಿಳುನಾಡಿನಲ್ಲಿ 9,674 ಮಂದಿಗೆ ಕೊರೊನಾ ತಗುಲಿದ್ದು, 66 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಗುಜರಾತ್ನಲ್ಲಿ 9,592 ಮಂದಿ ಸೋಂಕಿಗೆ ತುತ್ತಾಗಿದ್ದು, 586 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 8,470 ಮಂದಿ ಕೊರೊನಾಗೆ ತುತ್ತಾಗಿದ್ದು, 115 ಮಂದಿ ಮೃತಪಟ್ಟಿದ್ದಾರೆ. ಸುಮಾರು 3,045 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
Advertisement
Advertisement
ಆಂಧ್ರಪ್ರದೇಶದಲ್ಲಿ 2,205 ಮಂದಿಗೆ ಸೋಂಕು ತಗುಲಿದ್ದು, 48 ಮಂದಿ ಸಾವನ್ನಪ್ಪಿದ್ದಾರೆ. 1,192 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ತೆಲಂಗಾಣದಲ್ಲಿ 1,414 ಮಂದಿ ಕೊರೊನಾ ತುತ್ತಾಗಿದ್ದು, 34 ಮಂದಿಯನ್ನು ಮಹಾಮಾರಿ ಬಲಿ ಪಡೆದಿದೆ. ಕೇರಳದಲ್ಲಿ 561 ಮಂದಿಯಲ್ಲಿ ಈವರೆಗೆ ಸೋಂಕು ಕಾಣಿಸಿಕೊಂಡಿದ್ದು, 4 ಸೋಂಕಿತರು ಮೃತಪಟ್ಟಿದ್ದಾರೆ. 493 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಕರ್ನಾಟಕದಲ್ಲಿ ಈವರೆಗೆ 987 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 35ಕ್ಕೆ ಏರಿದೆ. ಒಟ್ಟು 460 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.